ದೇವನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ, ಕನ್ನಮಂಗಲ ಗ್ರಾಮದಲ್ಲಿ ವಾಸವಿರುವ ಫಿರಾದುದಾರರು, ದಿನಾಂಕ:15/08/2024 ರಂದು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ಕನ್ನಮಂಗಲ ಗೇಟ್ ಬಸ್ ನಿಲ್ದಾಣ ಹತ್ತಿರ ಬಸವೇಶ್ವರ ಎಂಟರ್ ಪೈಸಸ್ ಅಂಗಡಿಯನ್ನು ಇಟ್ಟುಕೊಂಡಿದ್ದು, ಅಪರಿಚಿತನೊರ್ವನು ಫಿರಾದುದಾರರ ಖಾತೆಗೆ 50,000/- ಹಣವನ್ನು ನಕಲಿ ಫೋನ್ ಪೇ ಮಾಡಿ 49,500/-ಹಣವನ್ನು ನಗದು ರೂಪದಲ್ಲಿ ಪಡೆದುಕೊಂಡು ಮೋಸ ಮಾಡಿರುತ್ತಾನೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ದಿನಾಂಕ:16/08/2024 ರಂದು ವಿಧ್ಯಾರಣ್ಯಪುರ ಬಸ್ ನಿಲ್ದಾಣದ ಹತ್ತಿರ ಓರ್ವ ವ್ಯಕ್ತಿಯನ್ನು 1 ಮೊಬೈಲ್ ಫೋನ್ ಮತ್ತು 25,000/- ನಗದು ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ಆರೋಪಿಯನ್ನು ದಿನಾಂಕ :16/08/2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪಿಸಿರುತ್ತೆ.
ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಶ್ರೀ. ಸಜೀತ್ ವಿ ಜೆ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಶ್ರೀ ನವೀನ್ ಕುಮಾರ, ಸಹಾಯಕ ಪೊಲೀಸ್ ಆಯುಕ್ತರು ದೇವನಹಳ್ಳಿ ರವರ ನೇತೃತ್ವದಲ್ಲಿ, ದೇವನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ.ಧರ್ಮೇಗೌಡರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









