ಬಸವನಗುಡಿ ಪೊಲೀಸ್ ಠಾಣಾ ಸರಹದ್ದಿನ, ಹೆಚ್.ಬಿ ಸಮಾಜ ರಸ್ತೆ, ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವ ಫಿಲ್ಯಾದುದಾರರು, ದಿನಾಂಕ:30/07/2024 ರಂದು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:30/07/2024 ರಂದು ಮಧ್ಯಾಹ್ನ ಎಂ.ಎನ್ ಕೃಷ್ಣರಾವ್ ರೋಡ್, ಬಸವನಗುಡಿ ಯಲ್ಲಿ ಫಿರಾದುದಾರರು ರಸ್ತೆ ದಾಟುವ ಸಮಯದಲ್ಲಿ ದ್ವಿ-ಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಫಿರಾದಿಯವರ ಕೊರಳಲ್ಲಿದ್ದ ಸುಮಾರು ಸುಮಾರು 35 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಚಿನ್ನದ ಸರವು 2.10 ಲಕ್ಷಬೆಲೆಬಾಳುವುದೆಂದು ತಿಳಿಸಿರುತ್ತಾರೆ. ಈ ಕುರಿತು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿರುತ್ತದೆ.
ಈ ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:04/08/2024 ರಂದು ಹೆಚ್.ಎ.ಎಲ್ ಅನ್ನಸಂದ್ರ ಪಾಳ್ಯದಲ್ಲಿರುವ ಮಸೀದಿಯೊಂದರ ಪಕ್ಕ ಇಬ್ಬರು ವ್ಯಕ್ತಿಗಳನ್ನು ಕೃತ್ಯಕ್ಕೆ ಬಳಸಿದ್ದ 1 ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಸರಗಳ್ಳತನ ಮಾಡಿರುವುದಾಗಿ ತಪ್ಪೋಪ್ಪಿಕೊಂಡಿರುತ್ತಾರೆ.
ದಿನಾಂಕ:05/08/2024 ರಂದು ಈ ಇಬ್ಬರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 10 ದಿನಗಳಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಮೈಸೂರು ನಗರದ ಜ್ಯೂವೆಲರಿ
ಶಾಪವೊಂದರಲ್ಲಿ 30 ಗ್ರಾಂ ತೂಕದ ಚಿನ್ನದ ಸರವನ್ನು ಮಾರಾಟ ಮಾಡಿದ್ದನ್ನು 30 ದಿನಾಂಕ:07/08/2024 ರಂದು ವಶಪಡಿಸಿಕೊಳ್ಳಲಾಯಿತು.
ದಿನಾಂಕ:12/08/2024 ರಂದು ಹೆಚ್.ಎ.ಎಲ್‌ನಲ್ಲಿರುವ ಜ್ಯೂವೆಲರಿ ಶಾಪ್‌ವೊಂದರಲ್ಲಿ ಮಾರಾಟ ಮಾಡಿದ್ದ 21 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಯಿತು.
ಪ್ರಕರಣದಲ್ಲಿನ ಆರೋಪಿಯೋರ್ವನು ಆತನ ಹೆಂಡತಿಗೆ 35 ಗ್ರಾಂ ತೂಕದ ಚಿನ್ನದ ಸರವನ್ನು ನೀಡಿದ್ದನ್ನು, ಆಕೆಯು ದಿನಾಂಕ:13/08/2024 ರಂದು ಠಾಣೆಗೆ ತಂದು ಒಪ್ಪಿಸಿರುತ್ತಾಳೆ.
ಈ ಪ್ರಕರಣದಿಂದ ಒಟ್ಟಾರೆಯಗಿ 86 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಯಿತು. ಮೌಲ್ಯ 5.50,000/-(ಐದು ಲಕ್ಷದ ಐವತ್ತು ಸಾವಿರ ರೂಪಾಯಿ).
ಈ ಇಬ್ಬರು ಆರೋಪಿಗಳ ಬಂಧನದಿಂದ ಇತರೆ ಎರಡು ಪ್ರಕರಣಗಳು ಪತ್ತೆಯಾಗಿರುತ್ತವೆ.
ಬಸವನಗುಡಿ ಪೊಲೀಸ್ ಠಾಣೆಯ ಪ್ರಕರಣವು ಸೇರಿದಂತೆ,ದಿನಾಂಕ:14/08/2024 ರಂದು ಇಬ್ಬರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಲೋಕೇಶ್ ಭರಮಪ್ಪ ಜಗಲಾಸ, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾರಾಯಣಸ್ವಾಮಿ ವಿ ರವರ ನೇತೃತ್ವದಲ್ಲಿ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಮತಿ ಸವಿತರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









