220 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿಯ ವಸ್ತುಗಳ ವಶ, ಮೌಲ್ಯ 18 ಲಕ್ಷ.
ಅಮೃತಹಳ್ಳ ಪೊಲೀಸ್ ಠಾಣಾ ಪೊಲೀಸ್ ಠಾಣಾ ಸರಹದ್ದಿನ ರಾಚೇನಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:11/02/2025 ರಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:04/02/2025 ರಂದು ತಮ್ಮ ಸ್ವಂತ ಊರಾದ ಬಿಹಾರಕ್ಕೆ ಹೋಗಿರುತ್ತಾರೆ. ದಿನಾಂಕ:11/02/2025 ರಂದು ವಾಪಸ್ ಬಂದು ನೋಡಲಾಗಿ ಮನೆಯ ಹಿಂಭಾಗದಲ್ಲಿರುವ ಸೈಡ್ ಕಿಟಕಿಯನ್ನು ಓಪನ್ ಮಾಡಿ, ಮನೆಯ ಕೊಠಡಿಯ ಬೀರುವಿನಲ್ಲಿಟ್ಟದ್ದ ಡೈಮಂಡ್, ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಾಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಭಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:22/02/2025 ರಂದು ಬಾಗಲೂರಿನ ರಜಾಕ್ ಪಾಳ್ಯ ಮಸೀದಿ ಹತ್ತಿರ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಕನ್ನ ಕಳವು ಮಾಡಲು ಪ್ರಚೋದಿಸಿದ ವ್ಯಕ್ತಿಯು ಕಳವು ಮಾಡಿದ ಚಿನ್ನಾಭರಣಗಳನ್ನು ಮಾರಾಟ ಮಾಡಿ, ಹಣವನ್ನು ನೀಡುವುದಾಗಿ ತಿಳಿಸಿದ ಮೇರೆಗೆ ಈ ಕೃತ್ಯವೆಸಗಿರುವುದಾಗಿ ಮತ್ತು ಪ್ರಚೋದಿಸಿದ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ನೀಡಿರುತ್ತಾನೆ.
ಆರೋಪಿತನು ನೀಡಿದ ಮಾಹಿತಿ ಮೇರೆಗೆ ದಿನಾಂಕ:22/02/2025 ರಂದು ವರ್ತೂರಿನ ಮುಖ್ಯರಸ್ತೆಯಲ್ಲಿ ಕನ್ನ ಕಳವು ಮಾಡಲು ಪ್ರಚೋದಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:22/02/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಗಳಿಬ್ಬರನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಕಳವು ಮಾಡಿದ ಚಿನ್ನಾಭರಣಗಳನ್ನು ಪ್ರಚೋದಿಸಿದ ವ್ಯಕ್ತಿಯು ವರ್ತೂರಿನಲ್ಲಿ ವಾಸವಿರುವ ಆತನ ಸಂಬಂಧಿಕನೋರ್ವನಿಗೆ 44 ಗ್ರಾಂ ಚಿನ್ನಾಭರಣ ಹಾಗ 700 ಗ್ರಾಂ ಬೆಳ್ಳಿಯ ವಸ್ತಗಳನ್ನು ನೀಡಿರುವುದಾಗಿ ತಿಳಿಸಿರುತ್ತಾನೆ. ಪ್ರಚೋದಿಸಿ ವ್ಯಕ್ತಿಯ ಸಂಬಂಧಿಕನಿಗೆ ನೋಟೀಸ್ ಜಾರಿ ಮಾಡಿದ್ದು, ಆತನು ದಿನಾಂಕ:26/02/2025 ರಂದು ಅಮೃತಹಳ್ಳಿ ಪೊಲೀಸ್ ಠಾಣೆಗೆ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ದಿನಾಂಕ:26/02/2025 ರಂದು ಬಾಗಲೂರಿನ ಜ್ಯೂವೆಲರಿ ಅಂಗಡಿಯೊಂದರಲ್ಲಿ 20 ಗ್ರಾಂ ಚಿನ್ನಾಭರಣಗಳನ್ನು ಮಾರಾಟ ಮಾಡಿರುವುದಾಗಿ ಆರೋಪಿಯು ತಿಳಿಸಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ದಿನಾಂಕ:27/02/2025 ರಂದು ಚಿಕ್ಕಸಂದ್ರ ಮತ್ತು ಹಾಸನದ ಎರಡು ನ್ಯೂವಲರಿ ಅಂಗಡಿಗಳಲ್ಲಿ 134 ಗ್ರಾಂ ಚಿನ್ನಾಭರಣ ಹಾಗೂ 300 ಗ್ರಾಂ ಬೆಳ್ಳಿಯ ವಸ್ತುಗಳನ್ನು ಮಾರಾಟ ಮಾಡಿರುವುದಾಗಿ ಆರೋಪಿಯು ತಿಳಿಸಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ದಿನಾಂಕ:28/02/2025 ರಂದು ಎಂ.ಎಸ್. ಪಾಳ್ಯದಲ್ಲಿ ವಾಸವಿರುವ ಆರೋಪಿತನ ಸಹೋದರನಿಗೆ 20 ಗ್ರಾಂ ಚಿನ್ನಾಭರಣವನ್ನು ನೀಡದ್ದನ್ನು, ಆರೋಪಿಯ ಸೋದರನಿಗೆ ನೋಟಿಸ್ ಜಾರಿ ಮಾಡಿದ್ದು, ಆತನು ಠಾಣೆಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಈ ಪ್ರಕರಣದ ಆರೋಪಿಗಳ ವಶದಿಂದ ಒಟ್ಟು 220 ಗ್ರಾಂ ಚಿನ್ನಾಭರಣ ಹಾಗೂ 1 ಕೆ.ಜಿ ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ * 18,00,000/- (ಹದಿನೆಂಟು ಲಕ್ಷ ರೂಪಾಯಿ)
ಈ ಪ್ರಕರಣದ ಆರೋಪಿಗಳ ಬಂಧನದಿಂದ ಅಮೃತಹಳ್ಳಿ ಪೊಲೀಸ್ ಠಾಣೆಯ 05 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:01/03/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಜೀತ್, ಐ.ಪಿ.ಎಸ್ ಮತ್ತು ಸಂಪಿಗೆಹಳ್ಳಿ ಉಪ ವಿಭಾಗದ ಎ.ಸಿ.ಪಿ ಶ್ರೀ. ಮುರುಗೇಂದ್ರಯ್ಯ ರವರ ನೇತೃತ್ವದಲ್ಲಿ ಹಾಗೂ ಅಮೃತಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಂಬರೀಶ್ ಎಂ. ರವರ ಅಧಿಕಾರಿ/ ಸಿಬ್ಬಂದಿಯವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









