ದ.ಕ.ಜಿಲ್ಲೆಯ, ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ದಿನಾಂಕ; 04.09.2024 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 147/2024 ಕಲಂ: 303(2) ಬಿ ಎನ್ ಎಸ್ – 2023 ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ ನಗದು ಹಣವನ್ನು ಸ್ವಾಧೀನಪಡಿಸಿರುತ್ತಾರೆ.
ಸದ್ರಿ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐಪಿಎಸ್ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ರಾಜೇಂದ್ರರವರ ಮಾರ್ಗದರ್ಶನದಲ್ಲಿ, ಶ್ರೀ. ಎಸ್. ವಿಜಯಪ್ರಸಾದ್, ಡಿ.ವೈ.ಎಸ್.ಪಿ. ಬಂಟ್ವಾಳ ರವರ ನೇತೃತ್ವದ, ಶ್ರೀ ಹರೀಶ್ ಎಂ.ಆರ್, ಪಿ.ಎಸ್. ಐ.ಬಂಟ್ವಾಳ ಗ್ರಾಮಾಂತರ ಠಾಣೆರವರ ವಿಶೇಷ ಪತ್ತೆ ತಂಡವನ್ನು ರಚಿಸಿರುತ್ತಾರೆ. ಸದ್ರಿ ತನಿಖಾ ತಂಡದಲ್ಲಿ ಹೆಚ್ ಸಿ ಹರಿಶ್ಚಂದ್ರ , ಹೆಚ್ ಸಿ ರಾಧಾಕೃಷ್ಣ, ಪಿಸಿಗಳಾದ ಬಸವರಾಜ ಎಚ್ ,ಕೆ, ಕುಮಾರ್ ಎಚ್,ಕೆ, ಅಶೋಕ ಮತ್ತು ರಂಜಾನ್ ರವರುಗಳು ಕಾರ್ಯನಿರ್ವಹಿಸಿರುತ್ತಾರೆ.








