ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಸಾರಕ್ಕಿಯ 10ನೇ ಕ್ರಾಸ್‌ನಲ್ಲಿ ವಾಸವಿರುವ ಫಿರಾದುದಾರರು ತಮ್ಮ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ದಿನಾಂಕ:23/05/2024 ರಂದು ಯಾರೋ ಅಪರಿಚಿತ ವ್ಯಕ್ತಿಗಳು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರನ್ನು ಸಲ್ಲಿಸಿರುತ್ತಾರೆ. ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳುವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ, ದಿನಾಂಕ:05/07/2024 ರಂದು ಕರಿಸಂದ್ರ 2ನೇ ಹಂತ, ಬನಶಂಕರಿಯಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಕಳ್ಳತನ ಮಾಡಿರುವುದಾಗಿ ತಪ್ಪೋಪ್ಪಿಕೊಂಡಿರುತ್ತಾರೆ. ನಂತರ ಅವರುಗಳು ನೀಡಿದ ಮಾಹಿತಿ ಮೇರೆಗೆ ಸಾರಕ್ಕಿಯ ಖಾಲಿ ಮೈದಾನದಲ್ಲಿ ನಿಲ್ಲಿಸಿದ್ದ 4 ಲಕ್ಷ ಮೌಲ್ಯದಏಳು ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಆ ಇಬ್ಬರು ವ್ಯಕ್ತಿಗಳನ್ನು ದಿನಾಂಕ:06/07/2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಲಾಗಿ, ಮಾನ್ಯ ನಾಯಾಲಯವು ಆರೋಪಿಗಳಿಬ್ಬರಿಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಮಾನ್ಯ ಉಪ ಪೊಲೀಸ್ ಕಮೀಷನರ್ ಶ್ರೀ.ಲೋಕೇಶ್ ಬಿ ಜಗಲಾಸರ್ ಐ.ಪಿ.ಎಸ್‌ರವರ ಮಾರ್ಗದರ್ಶನದಲ್ಲಿ, ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ. ವಿ.ನಾರಾಯಣಸ್ವಾಮಿ ರವರ ನೇತೃತ್ವದಲ್ಲಿ, ಜೆ.ಪಿ.ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.










