ಪ್ರತಿಷ್ಠಿತ Lacoste, Gant & Live’s ಕಂಪನಿಯ ಬಟ್ಟೆಗಳನ್ನು ನಕಲು ಮಾಡಿ ಅಸಲು ಮಾಲುಗಳೆಂದು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಸಿಸಿಬಿ ದಾಳಿ,
ಬೆಂಗಳೂರು ನಗರದ ವಿಲ್ಸನ್‌ಗಾರ್ಡನ್ ಪೊಲೀಸ್ ಠಾಣೆ ಸರಹದ್ದಿನ ಮಾಮೂಲ್ ಪೇಟೆಯ ಅಂಗಡಿಯೊಂದರಲ್ಲಿ ಪ್ರತಿಷ್ಠಿತ Lacoste, Gant & Live’sಕಂಪನಿಯ ಹೆಸರಿನಲ್ಲಿ ನಕಲು ಬಟ್ಟೆಗಳನ್ನು ದಾಸ್ತಾನು ಮಾಡಿಕೊಂಡು, ಕಂಪನಿಯ ಅಸಲಿ ಮಾಲುಗಳೆಂದು ಸಾರ್ವಜನಿಕರಿಗೆ ನಂಬಿಸಿ ಮಾರಾಟ ಮಾಡುತ್ತಿದ್ದಾರೆಂದು ಖಚಿತ ಮಾಹಿತಿ ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳಿಗೆ ಬಂದಿರುತ್ತದೆ. ಈ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ಅಂಗಡಿಯ ಮೇಲೆ ದಾಳಿ ನಡೆಸಿ, ಅಂಗಡಿಯ ಮಾಲೀಕನನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ವಶಕ್ಕೆ ಪಡೆದ ವ್ಯಕ್ತಿಯ ವಶದಿಂದ 4,00,000 (ನಾಲ್ಕು ಲಕ್ಷ ರೂಪಾಯಿಗಳು) ಮೌಲ್ಯದ ನಕಲಿ ಬಟ್ಟೆಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶ್ವಸಿಯಾಗಿರುತ್ತಾರೆ.
ಈ ಸಂಬಂಧ ಆರೋಪಿತರ ವಿರುದ್ದ ವಿಲ್ಸನ್ ಗಾರ್ಡ್‌ನ್ ಪೊಲೀಸ್ ಠಾಣೆಯಲ್ಲಿ ಕಾಫಿರೈಟ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿರುತ್ತದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ ಹಾಗೂ ಸಿಬ್ಬಂದಿಯವರುಗಳು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.









