ಧಾರವಾಡ :ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಎಲ್ಲೆಡೆ ಕೇಳಿಬರುತ್ತಿದೆ. ಇದೊಂದು ಸಾಮಾಜಿಕ ಪಿಡುಗು. ಇದರ ನಿರ್ಮೂಲನೆಗೆ ನಿಸ್ವಾರ್ಥ ಸೇವೆ ಮತ್ತು ನಿಸ್ವಾರ್ಥ ಜೀವನ ನಮ್ಮದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಬಿ.ಜಿ.ರಾಮ ಹೇಳಿದರು.
ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಇಂದು ಬೆಳಗ್ಗೆ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕರ್ನಾಟಕ ಲೋಕಾಯುಕ್ತ ಧಾರವಾಡ ಸಹಯೋಗದಲ್ಲಿ ಹಮ್ಮಿಕೊಂಡಿರುವ ಜಾಗೃತಿ ಸಪ್ತಾಹ-2024ಕ್ಕೆ ಚಾಲನೆ ನೀಡಿ ಮಾತನಾಡಿದರು.
ಭ್ರಷ್ಟಾಚಾರದಿಂದ ನಿರಂತರ ಸೇವೆಯಲ್ಲಿ ಪ್ರಾಮಾಣಿಕತೆ ಹಾಳಾಗುತ್ತಿದೆ. ಸಮಾಜದ ಮಾಲಿನ್ಯವು ವ್ಯವಸ್ಥೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಗಳನ್ನು ಮತ್ತು ಕಾರ್ಯಗಳನ್ನು ಮುಕ್ತವಾಗಿ ಮತ್ತು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದು ಒತ್ತಿ ಹೇಳಿದರು.
ನಿತ್ಯದ ಕೆಲಸದಿಂದ ಮನೋಬಲ ಹೆಚ್ಚುತ್ತದೆ. ಕಾಯಕ ಶುಚಿಯಾಗಿದ್ದರೆ ಬೇರೆಯವರು ಕಾಯುವ ಅಗತ್ಯವಿಲ್ಲ. ಇತರ ಜನರ ಪ್ರಯತ್ನಗಳನ್ನು ಗೌರವಿಸಿ ಮತ್ತು ಅಂಗೀಕರಿಸಿ. ಸಮಾಜದ ಏಳಿಗೆ ಮತ್ತು ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ಬಾಳೋಣ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು ಬಿ.ಜಿ.ರಾಮ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲಬ್ಯಾಕೋಡ ಮಾತನಾಡಿ, ಅತಿಯಾದ ಮಹತ್ವಾಕಾಂಕ್ಷೆಗೆ ಒಳಗಾಗದೆ ಕೊಟ್ಟ ಪಾಲಿನಲ್ಲೇ ತೃಪ್ತರಾಗಬೇಕು. ಪ್ರತಿಯೊಬ್ಬರೂ ತಮ್ಮ ಆರೋಗ್ಯ ಮತ್ತು ಉದ್ಯೋಗ ಸಫಲತೆಗೆ ಆದ್ಯತೆ ನೀಡಬೇಕು. ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ಜೀವನ ಸುಂದರವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಸಂಯೋಜಕಿ, ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ಎಲ್ಲ ಸರ್ಕಾರಿ ನೌಕರರು ಜವಾಬ್ದಾರಿ, ಪ್ರಾಮಾಣಿಕತೆ ಮತ್ತು ಮಾನವೀಯತೆಯ ಭಾವನೆ ಇರುವವರೆಗೆ ಯಾವುದೇ ಸಮಸ್ಯೆಗಳು ಉದ್ಭವಿಸುವುದಿಲ್ಲ.









