ಬನಶಂಕರಿ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ರವರು ದಿನಾಂಕ-30-06- 2024 ರಂದು ಮದ್ಯಾಹ್ನ ಗಸ್ತಿನ ಕರ್ತವ್ಯದಲ್ಲಿದ್ದಾಗ ಬನಶಂಕರಿ ಪೈರ್ ಸ್ಟೇಷನ್ ಪಕ್ಕದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಇರುವುದನ್ನು ಗಮನಿಸಿ ಸ್ಥಳೀಯ ಬಾತ್ಮೀಧಾರರಿಂದ ಆ ವ್ಯಕ್ತಿಗಳನ್ನು ಮಾತನಾಡಿಸಲಾಗಿ ಅವರುಗಳು ಮಾಧಕ ವಸ್ತು ಗಾಂಜಾವನ್ನು ಇಟ್ಟುಕೊಂಡು ಹಣಕ್ಕಾಗಿ ಮಾರಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಿಸಿರುತ್ತದೆ.
ಈ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರು ವಶಕ್ಕೆ ಪಡೆದ ಇಬ್ಬರು ವ್ಯಕ್ತಿಗಳನ್ನು ಪರಿಶೀಲಿಸಲಾಗಿ, ಅವರ ಬಳಿ ಒಟ್ಟು 2 ಕೆ.ಜಿ 127 ಗ್ರಾಂ ತೂಕದ ಮಾದಕ ವಸ್ತು ಗಾಂಜಾ ಮತ್ತು ಎಲೆಕ್ಟ್ರಾನಿಕ್ ವೇಯಿಂಗ್ ಮೆಶೀನ್ ಹಾಗೂ ಮೊಬೈಲ್ ಪೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳ ಮೌಲ್ಯ 1,10,000/-ನಂತರ ಅವರುಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿ ಅವರು ಡ್ರಗ್ಸ್ ಪೆಡ್ಲರ್‌ಗಳಾಗಿದ್ದು, ಹೊರ ರಾಜ್ಯಗಳಿಂದ ಕಡಿಮೆ ದರದಲ್ಲಿ ಗಾಂಜಾ ಖರೀದಿಸಿ ತಂದು ಸ್ಥಳೀಯ ಗಿರಾಕಿಗಳಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ. ದಿನಾಂಕ:01.07.2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಲಾಗಿ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಮಾನ್ಯ ಉಪ ಪೊಲೀಸ್ ಕಮೀಷನರ್ ಶ್ರೀ.ಲೋಕೇಶ್ ಬಿ ಜಗಲಾಸರ್ ಐ.ಪಿ.ಎಸ್‌ರವರ ಮಾರ್ಗದರ್ಶನದಲ್ಲಿ, ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ.ನಾರಾಯಣಸ್ವಾಮಿ ವಿರವರ ನೇತೃತ್ವದಲ್ಲಿ, ಬನಶಂಕರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಕೊಟ್ರೇಶಿ ಬಿ.ಎಂ ಮತ್ತು ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.










