ದಿನಾಂಕ:30/08/2024 ರಂದು ಫಿರಾದುದಾರರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ವೈಟ್ ಫೀಲ್ಡ್‌ನಲ್ಲಿ ಒಂದು ಕಂಪನಿಯನ್ನು ಹೊಂದಿದ್ದು, ಕಂಪನಿಯಲ್ಲಿ ಓರ್ವ ವ್ಯಕ್ತಿಯು ಸಿಸ್ಟಂ ಆಡ್ಮಿನ್ ಆಗಿ 2024 ರ ಫೆಬ್ರವರಿಯಿಂದ ಕೆಲಸ ನಿರ್ವಹಿಸುತ್ತಿದ್ದನು. ದಿನಾಂಕ:22/08/2024 ರಿಂದ ಸಿಸ್ಟಂ ಆಡಿನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯು ಕಂಪನಿಯ ಕೆಲಸಕ್ಕೆ ಬಂದಿರುವುದಿಲ್ಲ.
ಸಿಸ್ಟಂ ಆಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯು, ಕೆಲಸ ನಿರ್ವಹಿಸುತ್ತಿದ್ದ ಸಮಯದಲ್ಲಿ ಕಂಪನಿಯಲ್ಲಿದ್ದ ಲ್ಯಾಪ್ ಟ್ಯಾಪ್‌ಗಳನ್ನು ಒಂದೊಂದಾಗಿ ಕಳ್ಳತನ ಮಾಡಿ, ಒಟ್ಟು 57 ಲ್ಯಾಪ್‌ಟ್ಯಾಪ್‌ಗಳನ್ನು ಕಳವು ಮಾಡಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:02/09/2024 ರಂದು ತಮಿಳುನಾಡಿನ ಹೊಸೂರಿನಲ್ಲಿರುವ ರಾಘವೇಂದ್ರ ಚಿತ್ರಮಂದಿರದ ಬಳಿ ಸಿಸ್ಟಂ ಆಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು 5 ಲ್ಯಾಪ್‌ಟಾಪ್‌ಗಳ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಕಂಪೆನಿಯಲ್ಲಿರುವ ಲ್ಯಾಪ್‌ಟಾಪ್‌ಗಳನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:02/09/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 8 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆಯಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಯಿತು. ವಿಚಾರಣೆ ವೇಳೆಯಲ್ಲಿ ಆರೋಪಿಯು ಹೂಸೂರುನಲ್ಲಿರುವ ಹಳೆಯ ಲ್ಯಾಪ್‌ಟ್ಯಾಪ್ ರಿಪೇರಿ ಮತ್ತು ಮಾರಾಟ ಮಾಡುವ ಅಂಗಡಿಗೆ 45 ಲ್ಯಾಪ್‌ಟಾಪ್‌ಗಳನ್ನು ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:03/09/2024 ರಂದು ಕಳುವು ಮಾಡಿದ್ದ 45 ಲ್ಯಾಪ್‌ಟಾಪ್‌ಗಳನ್ನು ಹೂಸೂರುನಲ್ಲಿರುವ ಹಳೆಯ ಲ್ಯಾಪ್‌ಟ್ಯಾಪ್ ರಿಪೇರಿ ಮತ್ತು ಮಾರಾಟ ಮಾಡುವ ಅಂಗಡಿಯಿಂದ ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದಲ್ಲಿ ಒಟ್ಟಾರೆಯಾಗಿ 50 ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಮೌಲ್ಯ 22,00,000/-(ಇಪ್ಪತ್ತೆರಡು ಲಕ್ಷ ರೂಪಾಯಿ).
ದಿನಾಂಕ:09/09/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಡಾ.ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಉಪ ವಿಭಾಗ ಶ್ರೀಮತಿ.ರೀನಾ ಸುವರ್ಣ ರವರ ಮಾರ್ಗದರ್ಶನದಲ್ಲಿ ವೈಟ್ ಫೀಲ್ಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಗುರುಪ್ರಸಾದ್.ಎ ಹಾಗೂ ಅಧಿಕಾರಿ/ಸಿಬ್ಬಂದಿರವರು ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









