32 ಗ್ರಾಂ ಚಿನ್ನದ ಸರ ವಶ, ಮೌಲ್ಯ 11.5 ಲಕ್ಷ.
ಬೇಧಿಸುವಲ್ಲಿ ರಾಜರಾಜೇಶ್ವರಿ ನಗರದ ದ್ವಾರಕಾನಗರದಲ್ಲಿ ವಾಸವಿರುವ ಫಿಲ್ಯಾದುದಾರರು, ದಿನಾಂಕ:12/09/2024 ರಂದು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ತಲಘಟ್ಟಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಬನಶಂಕರಿ 6ನೇ ಹಂತ, ಬಿಡಿಎ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿರುವಾಗ, ಓರ್ವ ಅಪರಿಚಿತ ವ್ಯಕ್ತಿಯು ಏಕಾಏಕಿ ಫಿರಾದುದಾರರ ಕುತ್ತಿಗೆಯಲ್ಲಿದ್ದ ಸುಮಾರು 32 ಗ್ರಾಂ ಚಿನ್ನದ ಚೈನನ್ನು ಸುಲಿಗೆ ಮಾಡಿಕೊಂಡು, ಮತ್ತೋರ್ವ ವ್ಯಕ್ತಿಯು ಸ್ವಲ್ಪ ದೂರದಲ್ಲಿ ದ್ವಿ-ಚಕ್ರ ವಾಹನವನ್ನು ಸ್ಟಾರ್ಟ್ ಮಾಡಿಕೊಂಡು ನಿಲ್ಲಿಸಿಕೊಂಡಿದ್ದು, ಸುಲಿಗೆ ಮಾಡಿದ ವ್ಯಕ್ತಿಯು ಆತನೊಂದಿಗೆ ದ್ವಿ-ಚಕ್ರ ವಾಹನದಲ್ಲಿ ಪರಾರಿಯಾಗಿರುತ್ತಾನೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆ ಕೈಗೊಂಡು ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ದಿನಾಂಕ:13/09/2024 ರಂದು ಇಬ್ಬರು ವ್ಯಕ್ತಿಗಳನ್ನು ಕೋಣನಕುಂಟೆ ಕ್ರಾಸ್ ಬಳಿಯಿಂದ ಈ ಪ್ರಕರಣದಲ್ಲಿ ಕೃತ್ಯಕ್ಕೆ ಉಪಯೋಗಿಸಿದ್ದ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ಸುಲಿಗೆ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ. ಸುಲಿಗೆ ಮಾಡಿದ ಚಿನ್ನದ ಸರವನ್ನು ಹೊಸಕೆರೆಹಳ್ಳಿಯ ಜ್ಯೂವೆಲರಿ ಶಾಪ್‌ವೊಂದರಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:13/09/2024 ರಂದು ಹೊಸಕೆರೆಹಳ್ಳಿ ಮುಖ್ಯರಸ್ತೆಯಲ್ಲಿರುವ ಜ್ಯೂವೆಲರಿ ಶಾಪ್‌ವೊಂದರಲ್ಲಿ ಮಾರಾಟ ಮಾಡಿದ್ದ, 32 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ದಿನಾಂಕ:14/09/2024 ರಂದು ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಲೋಕೇಶ್.ಭ.ಜಗಲಾಸರ್ ಐ.ಪಿ.ಎಸ್ ಇವರ ಮಾರ್ಗದರ್ಶನದಲ್ಲಿ, ಸುಬ್ರಮಣ್ಯಪುರ ಉಪ-ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಶ್ರೀ.ಗಿರೀಶ್. ಎಸ್.ಬಿ ರವರ ನೇತೃತ್ವದಲ್ಲಿ, ತಲಘಟ್ಟಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಜಗದೀಶ.ಎನ್ರವರ ಆದಿಕಾರಿ/ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









