ಪ್ರತಿಷ್ಠಿತ Nike, Puma, Tomy Hilfiger, Under Armour, Adidas, Zara ಕಂಪನಿಗಳ ಬಟ್ಟೆಗಳನ್ನು ನಕಲು ಮಾಡಿ ಅಸಲು ಮಾಲುಗಳೆಂದು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಸಿ.ಸಿ.ಬಿ.ಯಿಂದ ದಾಳಿ. 1.38 ಕೋಟಿ ಮೌಲ್ಯದ ನಕಲಿ ಬಟ್ಟೆಗಳ ವಶ.
ಬೆಂಗಳೂರು ನಗರದ ರಾಜರಾಜೇಶ್ವರಿನಗರ ಪೊಲೀಸ್ ಠಾಣೆ ಸರಹದ್ದಿನ ಬಿ.ಇ.ಎಂ.ಎಲ್. ಲೇಔಟ್ ನಲ್ಲಿರುವ ಅಂಗಡಿಯೊಂದರಲ್ಲಿ ವಿವಿಧ ಪ್ರತಿಷ್ಟಿತ ಕಂಪನಿಗಳಾದ Nike, Puma, Tomy Hilfiger, Under Armour, Adidas, Zaraಕಂಪನಿಯ ಹೆಸರಿನಲ್ಲಿ ನಕಲು ಬಟ್ಟೆಗಳನ್ನು ದಾಸ್ತಾನು ಮಾಡಿಕೊಂಡು, ಕಂಪನಿಯ ಅಸಲಿ ಮಾಲುಗಳೆಂದು ಸಾರ್ವಜನಿಕರಿಗೆ ನಂಬಿಸಿ ಮಾರಾಟ ಮಾಡುತ್ತಿದ್ದಾರೆಂದು ಖಚಿತ ಮಾಹಿತಿಯು ಬಾದಾರರಿಂದ ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳಿಗೆ ದೊರೆತಿರುತ್ತದೆ. ಈ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿ/ಸಿಬ್ಬಂದಿಗಳು ಮೇಲೆ ತಿಳಿಸಿದ ಅಂಗಡಿಯ ಮೇಲೆ ದಾಳಿ ನಡೆಸಿ, ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ವಶಕ್ಕೆ ಪಡೆದ ವ್ಯಕ್ತಿಯ ಕಡೆಯಿಂದ 1.38.92.332(ಒಂದು ಕೋಟಿ ಮೂವತ್ತೆಂಟು ಲಕ್ಷ ತೊಂಬತ್ತೆರಡು ಸಾವಿರದ ಮುನ್ನೂರ ಮೂವತ್ತೆರಡು ರೂಪಾಯಿ) ಮೌಲ್ಯದ ನಕಲಿ ಬಟ್ಟೆಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶ್ವಸಿಯಾಗಿರುತ್ತಾರೆ.
ಈ ಸಂಬಂಧ ಆರೋಪಿತರ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಕಾಪಿರೈಟ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿರುತ್ತದೆ.

ಕಾರ್ಯಾಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ ಹಾಗೂ ಸಿಬ್ಬಂದಿಯವರುಗಳು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.









