ದಿನಾಂಕ:14.06.2024ರಂದು ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ, ಹೆಚ್.ಆರ್.ಬಿ.ಆರ್ ಲೇಔಟ್ ಹೋಟೆಲ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂದು ಬಾತ್ಮೀದಾರರಿಂದ ಖಚಿತ ಮಾಹಿತಿ ದೊರೆತ್ತಿರುತ್ತದೆ. ಈ ಮಾಹಿತಿ ಆಧಾರದ ಮೇಲೆ ಬಾಣಸವಾಡಿ ಪೊಲೀಸರು ದಾಳಿ ನಡೆಸಿ ಇಬ್ಬರು ವಿದೇಶಿ ಮೂಲದ ಮಹಿಳೆಯರನ್ನು ರಕ್ಷಿಸಿರುತ್ತಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಹೋಟೆಲ್ ವ್ಯವಸ್ಥಾಪಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಹೋಟೆಲ್ ವ್ಯವಸ್ಥಾಪಕನು ಮಹಿಳೆಯರಿಗೆ ಹೆಚ್ಚಿನ ಹಣದ ಆಮಿಷವೊಡ್ಡಿ ಹೋಟೆಲ್ಗೆ ಗಿರಾಕಿಗಳನ್ನು ಕರೆಸಿಕೊಂಡು ವೇಶ್ಯವಾಟಿಕೆಯನ್ನು ನಡೆಸುತ್ತಿದ್ದನು. ರಕ್ಷಣೆಗೊಳಪಡಿಸಿದ ಇಬ್ಬರು ವಿದೇಶಿ ಮಹಿಳೆಯರನ್ನು ಅವರ ಸಂಬಂಧಿಕರ ಜೊತೆ ಕಳುಹಿಸಿ ಕೊಡಲಾಗಿದೆ.
ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಡಿ. ದೇವರಾಜಹಾಗೂ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಉಮಾಶಂಕರ್ ಎಂ.ಹೆಚ್. ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಅರುಣ್ ಸಾಲೂಂಕೆ ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.










