1 ಕೆ.ಜಿ 570 ಗ್ರಾಂ ಚಿನ್ನ ಮತ್ತು ವಜ್ರದ ಆಭರಣಗಳ ವಶ, ಮೌಲ್ಯ 1,22,78,000/-.
ವಿ.ವಿ.ಪುರಂ ಪೊಲೀಸ್ ಠಾಣಾ ಸರಹದ್ದಿನ ಚಾಮರಾಜಪೇಟೆಯಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:10/09/2024 ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:08/09/2024 ರಂದು ವ್ಯವಹಾರದ ನಿಮಿತ್ತಾ ಕೇರಳಕ್ಕೆ ಹೋಗಿರುತ್ತಾರೆ. ಮನೆಯಲ್ಲಿದ್ದ ಪಿರಾದುದಾರರ ಪತ್ನಿ ಹಾಗೂ ಪಿದ್ಯಾದಿಯ ತಂದೆಯವರು ಅದೇ ದಿನ ಮಗಳ ಮನೆಗೆ ಹೋಗಿರುತ್ತಾರೆ. ದಿನಾಂಕ:10/09/2024 ರಂದು ಪಿರಾದುದಾರರು ವಾಪಸ್ ಮನೆಗೆ ಬಂದು ನೋಡಲಾಗಿ, ಯಾರೋ ಕಳ್ಳರು ಮನೆಯ ಸೆಲ್ಲರ್‌ನಲ್ಲಿರುವ ಗಿಲ್‌ನ್ನು ಹೊಡೆದು ಮನೆಯೊಳಗೆ ಪ್ರವೇಶಿಸಿ ಮನೆಯ ಕೊಠಡಿಯ ಬೀರುವಿನಲ್ಲಿಟ್ಟಿದ್ದ ಸುಮಾರು 2 ಕೆ.ಜಿ ಚಿನ್ನ ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ಪಿರಾದುದಾರರ ಮನೆಯಲ್ಲಿ ಈ ಹಿಂದೆ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿಯು ಸೇರಿದಂತೆ ಇಬ್ಬರನ್ನು ದಿನಾಂಕ:31/09/2024 ರಂದು ಮಹಾರಾಷ್ಟ್ರದ ಸತಾರ ಜಿಲ್ಲೆಯ ಗೋಂದಲಿ ಗ್ರಾಮದಲ್ಲಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿರುತ್ತದೆ. ವಶಕ್ಕೆ ಪಡೆದ ವ್ಯಕ್ತಿಗಳು ಈ ಪ್ರಕರಣದಲ್ಲಿ ಚಿನ್ನ ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿರುವುದಾಗಿ ತಪ್ಪಿಪ್ಪಿಕೊಂಡಿರುತ್ತಾರೆ.

ದಿನಾಂಕ:01/10/2024 ರಂದು ಇಬ್ಬರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 8 ದಿನಗಳ ಕಾಲ ಪೊಲೀಸ್’ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಇಬ್ಬರು ವ್ಯಕ್ತಿಗಳನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ದಿನಾಂಕ:02/10/2024 ರಂದು ಓರ್ವ ಆರೋಪಿಯು ಜಕ್ಕೂರಿನಲ್ಲಿರುವ ತನ್ನ ಅಕ್ಕನ ಮನೆಯಲ್ಲಿ ಕಳವು ಮಾಡಿದ್ದ ಸುಮಾರು 652 ಗ್ರಾಂ ಚಿನ್ನದ ಆಭರಣಗಳು ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ 155 ಲಕ್ಷ.
ಈ ಪ್ರಕರಣದ ಮತ್ತೋರ್ವ ಆರೋಪಿಯು ಮಹಾರಾಷ್ಟ್ರದ ನವಿ ಮುಂಬೈ ನಲ್ಲಿರುವ ಆತನ ಅಕ್ಕನ ಮನೆಯಲ್ಲಿ ಹಾಗೂ ಕೊಲ್ಲಾಪುರದಲ್ಲಿನ ಸೊಂಡೊಲಿ ಗ್ರಾಮದ ಸ್ನೇಹಿತನ ಮನೆಯಲ್ಲಿ ಕಳವು ಮಾಡಿದ್ದ ಚಿನ್ನಾಭರಣಗಳನ್ನು ಇಟ್ಟಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:06/10/2024 ರಂದು ಆರೋಪಿಯ ಅಕ್ಕನ ಮನೆಯಿಂದ ಸುಮಾರು 354 ಗ್ರಾಂ ಚಿನ್ನದ ಆಭರಣವನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ *28.30 ಲಕ್ಷವಾಗಿರುತ್ತದೆ. ಹಾಗೂ ಆರೋಪಿಯು ಸ್ನೇಹಿತನ ಮನೆಯಲ್ಲಿಟ್ಟಿದ್ದ ಸುಮಾರು 564 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ 39.48 ಲಕ್ಷವಾಗಿರುತ್ತದೆ.

ಈ ಪ್ರಕರಣದ ಆರೋಪಿಗಳ ವಶದಿಂದ ಒಟ್ಟಾರೆಯಾಗಿ 1 ಕೆ.ಜಿ 570 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ 1,22,78,000/-(ಒಂದು ಕೋಟಿ ಇಪ್ಪತ್ತೆರಡು ಲಕ್ಷದ ಎಂಪ್ಪತ್ತೆಂಟು ಸಾವಿರ ರೂಪಾಯಿ).
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಲೋಕೇಶ ಭರಮಪ್ಪ ಜಗಳಸ, ಐ.ಪಿ.ಎಸ್.ರವರ ಮಾರ್ಗದರ್ಶನದಲ್ಲಿ ವಿ.ವಿ ಪುರಂ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಶಾಮಿದ್ ಬಾಷಾರವರ ನೇತೃತ್ವದಲ್ಲಿ, ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ.ಎಂ.ಧರ್ಮೇಂದರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡಲು ಯಶಸ್ವಿಯಾಗಿರುತ್ತಾರೆ.









