ದಿನಾಂಕ:23/10/2024 ರಂದು ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನ್ಯೂ ಮೈಕೋ ರೋಡ್, ಲಕ್ಕಸಂದ್ರದ ಬಳಿ ಓರ್ವ ವಿದೇಶಿ ವ್ಯಕ್ತಿಯು ನಿಷೇದಿತ ಮಾದಕ ವಸ್ತು ಎಂಡಿಎಂಎ ಕ್ರಿಸ್ಟೆಲ್‌ನ್ನು ದ್ವಿ- ಚಕ್ರ ವಾಹನದಲ್ಲಿರಿಸಿಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಾ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾನೆಂಬ ಬಾತ್ಮಿದಾರರಿಂದ ಖಚಿತ ಮಾಹಿತಿಯು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳಿಗೆ ದೊರೆತ್ತಿರುತ್ತದೆ.
ಈ ಮಾಹಿತಿಯನ್ನು ಆಧಾರಿಸಿ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದಲ್ಲಿ ಪ್ರಕರಣವನ್ನು ದಾಖಲಿಸಿ, ನಂತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಾತ್ಮೀದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ ಓರ್ವ ವಿದೇಶಿ ಮೂಲದ ವ್ಯಕ್ತಿಯನ್ನು ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಂಡಿರುತ್ತಾರೆ.
ವಶಕ್ಕೆ ಪಡೆದುಕೊಂಡ ವಿದೇಶಿ ಮೂಲದ ವ್ಯಕ್ತಿಯಿಂದ 1 ಕೆ.ಜಿ 3 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ ಕ್ರಿಸ್ಟೆಲ್, ಒಂದು ಪೋರ್ಟಬಲ್ ಎಲೆಕ್ಟ್ರಾನಿಕ್ ತೂಕದ ಯಂತ್ರ, ಒಂದು ಆಂಡ್ರಾಯ್ಡ್ ಮೊಬೈಲ್ ಫೋನ್, ಒಂದು ದ್ವಿ ಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಇವುಗಳ ಒಟ್ಟು ಮೌಲ್ಯ 1,50,00,000/- (ಒಂದು ಕೋಟಿ ಐವತ್ತು ಲಕ್ಷ).










