9 ದ್ವಿ-ಚಕ್ರ ವಾಹನ ಮತ್ತು 1 ಆಟೋ ರಿಕ್ಷಾ ವಶ. ಮೌಲ್ಯ 27 ಲಕ್ಷ.
ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಬಾಣವಾರದ ಶಾಂತಿನಗರದಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:04/11/2024 ರಂದು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:01/11/2024 ರಂದು ರಾತ್ರಿ ದ್ವಿ-ಚಕ್ರ ವಾಹನವನ್ನು ಮನೆಯ ಮುಂದೆ ನಿಲ್ಲಿಸಿದ್ದು, ಮರುದಿನ ಬೆಳಿಗ್ಗೆ ಬಂದು ನೋಡಲಾಗಿ, ಪಿರಾದುದಾರರು ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:06/11/2024 ರಂದು ಇಬ್ಬರು ವ್ಯಕ್ತಿಗಳನ್ನು ಪ್ರಕರಣದಲ್ಲಿ ಕಳುವಾಗಿದ್ದ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ ಹಾಗೂ ಬೆಂಗಳೂರಿನ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನ ಮತ್ತು ಆಟೋ ರಿಕ್ಷಾವನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.
ಈ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವನು ಬಾಲಕನಾಗಿದ್ದು, ಆತನ ಪೋಷಕರನ್ನು ಕರೆಸಿ ಇನ್ನು ಮುಂದೆ ಈ ರೀತಿಯ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ತಿಳುವಳಿಕೆ ನೀಡಿ, ಪೋಷಕರ ಜೊತೆ ಕಳುಹಿಸಿಕೊಟ್ಟಿರುತ್ತೆ.
ದಿನಾಂಕ:07/11/2024 ರಂದು ಪ್ರಕರಣದ ಮತ್ತೋರ್ವ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 4 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಕಳವು ಮಾಡಿದ್ದ ದ್ವಿ-ಚಕ್ರ ವಾಹನಗಳನ್ನು, ಚಿಕ್ಕಬಾಣವಾರ ಹಳೆ ರೈಲ್ವೆ ಸ್ಟೇಷನ್ ಹತ್ತಿರ ಹಾಗೂ ಆಚಾರ್ಯ ಕಾಲೇಜ್ ರಸ್ತೆ ತಮ್ಮೇನಹಳ್ಳಿ ಕ್ರಾಸ್ ಬಳಿ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:07/11/2024 ರಂದು ಚಿಕ್ಕಬಾಣವಾರ ಹಳೆ ರೈಲ್ವೆ ಸ್ಟೇಷನ್ ಹತ್ತಿರ 6 ದ್ವಿ-ಚಕ್ರ ವಾಹನಗಳನ್ನು ಹಾಗೂ ದಿನಾಂಕ:08/11/2024 ರಂದು ಆಚಾರ್ಯ ಕಾಲೇಜ್ ರಸ್ತೆ ತಮ್ಮೇನಹಳ್ಳಿ ಕ್ರಾಸ್ ಬಳಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 2 ದ್ವಿ-ಚಕ್ರ ವಾಹನ ಮತ್ತು 1 ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಗಳ ವಶದಿಂದ, ಒಟ್ಟಾರೆ 9 ದಿ-ಚಕ್ರ ವಾಹನಗಳು ಮತ್ತು I- ಪ್ಯಾಸೆಂಜರ್ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ 9,00,000/-(ಒಂಬತ್ತು ಲಕ್ಷ ರೂಪಾಯಿ).
ಈ ಪ್ರಕರಣದ ಆರೋಪಿಗಳ ಬಂಧನದಿಂದ 1) ಸೋಲದೇವನಹಳ್ಳಿ ಪೊಲೀಸ್ ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 1 ಪ್ಯಾಸೆಂಜರ್ ಆಟೋರಿಕ್ಷಾ ಕಳವು ಪ್ರಕರಣ, 2) ಕೆಂಗೇರಿ ಪೊಲೀಸ್ ಠಾಣೆಯ- ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ನೆಲಮಂಗಲ ಟೌನ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4) ತಲಘಟ್ಟಪುರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 5) ಬಾಗಲಗುಂಟೆ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 6 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಮತ್ತು ಆಟೋ ರಿಕ್ಷಾ ಕಳವು ಪ್ರಕರಣ ಪತ್ತೆಯಾಗಿದ್ದು, ಉಳಿದ 3 ದ್ವಿ-ಚಕ್ರ ವಾಹನಗಳ ಮಾಲೀಕರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.
ಈ ಕಾರ್ಯಾಚರಣೆಯನ್ನು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಸೈದುಲು ಆಡಾವತ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀಮತಿ ಮೇರಿ ಶೈಲಜ, ಎಸಿಪಿ, ಯಶವಂತಪುರ ಉಪ ವಿಭಾಗ ಮತ್ತು ಶ್ರೀ ಅಜಯ್ ಸಾರಥಿ, ಪ್ರಭಾರ ಪೊಲೀಸ್ ಇನ್ಸ್‌ಪೆಕ್ಟರ್, ಸೋಲದೇವನಹಳ್ಳಿ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.









