6 ದಿ-ಚಕ್ರ ವಾಹನಗಳ ವಶ, ಮೌಲ್ಯ 3.5 ಲಕ್ಷ.
ಬಾಣಸವಾಡಿಸರಹದ್ದಿನ, ಸುಬ್ಬಣ್ಣಪಾಳ್ಯದಲ್ಲಿ ವಾಸವಿರುವ ಫಿರಾದುದಾರರು DOB:18/12/2024 ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:14/12/2024 ರಂದು ರಾತ್ರಿ ತಮ್ಮ ಮನೆಯ ಮುಂಭಾಗ ದ್ವಿ-ಚಕ್ರ ವಾಹನವನ್ನು ಲಾಕ್ ಮಾಡಿ ನಿಲ್ಲಿಸಿದ್ದು, ಬೆಳಿಗ್ಗೆ ಬಂದು ನೋಡಲಾಗಿ ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:19/12/2024 ರಂದು ಚಿಕ್ಕಬಾಣಸವಾಡಿಯ ವಾಸಿಯಾದ ಓರ್ವ ವ್ಯಕ್ತಿಯನ್ನು, ಆತನ ವಾಸದ ಮನೆಯ ಮುಂದೆ ಈ ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳುವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರಿನ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಅದೇ ದಿನ ಆರೋಪಿಯ ಮನೆಯ ಬಳಿಯ ಖಾಲಿ ಜಾಗದಲ್ಲಿ ಕಳವು ಮಾಡಿ ನಿಲ್ಲಿಸಿದ್ದ. 5 ದ್ವಿ-ಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟು 6 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ * 3,50,000/-(ಮೂರು ಲಕ್ಷದ ಐವತ್ತು ಸಾವಿರ ರೂಪಾಯಿ).
ಈ ಪ್ರಕರಣದ ಆರೋಪಿಯ ಬಂಧನದಿಂದ 1) ಬಾಣಸವಾಡಿ ಪೊಲೀಸ್ ಠಾಣೆಯ-4 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ಇಂದಿರಾನಗರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, ಸೇರಿದಂತೆ ಒಟ್ಟು 6 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
00:20/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಎರಡು ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ-ಪೊಲೀಸ್ ಕಮೀಷನರ್ ಶ್ರೀ ದೇವರಾಜ್.ಡಿ. ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್, ಶ್ರೀ. ಉಮಾಶಂಕರ್.ಎಂ.ಹೆಚ್. ರವರ ನೇತೃತ್ವದಲ್ಲಿ, ಬಾಣಸವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಅರುಣ್ ಸಾಳುಂಕೆ ರವರ ಅಧಿಕಾರಿ/ಸಿಬ್ಬಂದಿಗಳು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಗಿರುತ್ತಾರೆ.









