42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿಯ ವಸ್ತುಗಳು, 2,000/-ನಗದು ವಶ. ಮೌಲ್ಯ 2.50 ಲಕ್ಷ,
ಬೊಮ್ಮನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ವಿರಾಟ್ ನಗರದ ನಾಡಮ್ಮ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:12/12/2024 ರಂದು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:12/12/2024 ರಂದು ಕೆಲಸಕ್ಕೆ ಹೋಗಿರುತ್ತಾರೆ. ವಾಪಸ್ ಬಂದು ನೋಡಲಾಗಿ, ಮನೆಯ ಮುಂಭಾಗಿಲನ್ನು ಹೊಡೆದು, ಕೊಠಡಿಯ ಬೀರುವಿನಲ್ಲಿಟ್ಟಿದ್ದ 42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿಯ ವಸ್ತುಗಳು ಮತ್ತು 2,000/- ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀಧಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:15/12/2024 ರಂದು ಅಂದ್ರಹಳ್ಳಿ, 2ನೇ ಕ್ರಾಸ್ ಬಳಿ ಓರ್ವ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ಕಳವು ಮಾಡಿದ್ದ 72,000/- ನಗದು ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:16/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 12 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಕಳವು ಮಾಡಿದ ಚಿನ್ನಾಭರಣಗಳ ಪೈಕಿ ಕೆಲವು ಒಡವೆಗಳನ್ನು ಹನುಮಂತ ನಗರ ವಿದ್ಯಾಪೀಠ ಸರ್ಕಲ್‌ನಲ್ಲಿರುವ ಜ್ಯೂವೆಲರಿ ಅಂಗಡಿಯಲ್ಲಿ ಅಡಮಾನ ಇಟ್ಟಿರುವುದಾಗಿ ಹಾಗೂ ಉಳಿದ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ಆರೋಪಿತನ ಸಂಬಂಧಿಕರ ಮನೆಯಲ್ಲಿಟ್ಟಿರುವುದಾಗಿ ತಿಳಿಸಿರುತ್ತಾನೆ.
ಸರ್ಕಲ್‌ನಲ್ಲಿರುವ ಜ್ಯೂವೆಲರಿ ಅಂಗಡಿಯ ತಂದು ಹಾಜರುಪಡಿಸಿದ್ದನ್ನು
ದಿನಾಂಕ:18/12/2024 ರಂದು ಹನುಮಂತ ನಗರ ವಿದ್ಯಾಪೀಠ ಮಾಲೀಕನು ಅಡಮಾನವಿಟ್ಟಿದ್ದ 30 ಚಿನ್ನಾಭರಣವನ್ನು ಠಾಣೆಗೆ ವಶಪಡಿಸಿಕೊಳ್ಳಲಾಯಿತು.
ದಿನಾಂಕ:19/12/2024 ರಂದು ಆರೋಪಿಯ ಸಂಬಂಧಿಕನು 12 ಗ್ರಾಂ ಚಿನ್ನಾಭರಣ ಹಾಗೂ 137 ಗ್ರಾಂ ಬೆಳ್ಳಿಯ ವಸ್ತುಗಳನ್ನು ಠಾಣೆಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟಾರೆ 42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿಯ ವಸ್ತುಗಳು ಮತ್ತು 3 2,000/- ನಗದನ್ನು ವಶ ಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ 2,50,000/-(ಎರಡು ಲಕ್ಷದ ಐವತ್ತು ಸಾವಿರ ರೂಪಾಯಿ).
ದಿನಾಂಕ:20/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಎರಡು ಪ್ರಕರಣಗಳ ಕಾರ್ಯಾಚರಣೆಯನ್ನು ಆತ್ಮೀಯ ವಿಭಾಗದ ಉಪ ಪೊಲೀಸ್ ಆಯುಕ್ತರು ಶ್ರೀಮತಿ.ಸಾರಾ ಫಾತಿಮ, ಐ.ಪಿ.ಎಸ್ ಮತ್ತು ಮೈಕೋಲೇಔಟ್ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಶ್ರೀ.ಬಿ.ಶಿವಶಂಕರ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ.ಪ್ರೀತಮ್.ಎ.ಡಿಹಾಗೂ ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









