ಪುಟ್ಟೇನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಜೆ.ಪಿ.ನಗರ 7ನೇ ಹಂತದ ನಟರಾಜ್ ಲೇಔಟ್‌ನಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:26/01/2025 ರಂದು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:21/01/2025 ರಂದು ರಾತ್ರಿ ತಮ್ಮ ದ್ವಿ-ಚಕ್ರ ವಾಹನವನ್ನು ಮನೆಯ ಮುಂದೆ ನಿಲ್ಲಿಸಿದ್ದು, ದಿನಾಂಕ:22/01/2025 ರಂದು ಬೆಳಿಗ್ಗೆ ನೋಡಲಾಗಿ, ಯಾರೋ ಕಳ್ಳರು ದ್ವಿ-ಚಕ್ರ ವಾಹನವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:28/01/2025 ರಂದು ಇಬ್ಬರು ವ್ಯಕ್ತಿಗಳನ್ನು ಜೆ.ಪಿ.ನಗರ 6ನೇ ಹಂತ, ಜರಗನಹಳ್ಳಿ ಪಾರ್ಕ್ ಹಿಂಭಾಗದ ರಸ್ತೆಯಲ್ಲಿ ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ದ್ವಿಚಕ್ರ ವಾಹನ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ. ಹಾಗೂ ಬೆಂಗಳೂರಿನ ವಿವಿಧ ಕಡೆಗಳಲ್ಲಿ 3 ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:28/01/2025 ರಂದು ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಠಾಣಾ ಸರಹದ್ದಿನ ಲಕ್ಷ್ಮಿ
ದೇವಸ್ಥಾನದ ಹಿಂದುಗಡೆಯ ಖಾಲಿ ಜಾಗದಲ್ಲಿ ಕಳವು ಮಾಡಿ ನಿಲ್ಲಿಸಿದ್ದ ಮೂರು ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಈ ಪ್ರಕರಣದ ಆರೋಪಿಗಳ ವಶದಿಂದ ಒಟ್ಟು 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 2.10.000/-(ಎರಡು ಲಕ್ಷದ ಹತ್ತು ಸಾವಿರ ರೂಪಾಯಿ)ಪ್ರಕರಣದ ಆರೋಪಿಗಳ ವಶದಿಂದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ 3 ದ್ವಿಚಕ್ರ ವಾಹನ ಕಳುವು ಪ್ರಕರಣ ಮತ್ತು ಜೆ.ಪಿ.ನಗರ ಪೊಲೀಸ್ ಠಾಣೆಯ 1 ದ್ವಿಚಕ್ರ ವಾಹನಕಳುವು ಪ್ರಕರಣ ಪತ್ತೆಯಾಗಿರುತ್ತವೆ.
ದಿನಾಂಕ: 29.01.2025 ರಂದು ಇಬ್ಬರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ರವರ ಮಾರ್ಗದರ್ಶನದಲ್ಲಿ ಸುಬ್ರಮಣ್ಯಪುರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರವರ ನೇತೃತ್ವದಲ್ಲಿ ಕೋಣನಕುಂಟೆ ಪೊಲೀಸ್‌ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಪಾಪಣ್ಣಮತ್ತು ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶ್ವಸ್ವಿಯಾಗಿರುತ್ತಾರೆ.









