ಮಡಿವಾಳ ಪೊಲೀಸ್ ಠಾಣಾ ಸರಹದ್ದಿನ ಮಾರುತಿನಗರದಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:09-01- 2025 ರಂದು ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:09-01- 2025 ರಂದು ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿರುತ್ತಾರೆ. ಫೋನ್‌ಮಾಡಿ, ನಿಮ್ಮ ಮನೆಯ ಬಾಗಿಲಿನ ಬೀಗವನ್ನು ಯಾರೋ ಪಿರಾದಿಯವರು ತಕ್ಷಣ ವಾಪಸ್ ಮನೆಗೆ ಬಂದು ನೋಡಲಾಗಿ, ಕೊಠಡಿಯ ಬೀರುವಿನಲ್ಲಿಟ್ಟಿದ್ದ ಸುಮಾರು 410 ಗ್ರಾಂ ಚಿನ್ನದಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಪ್ರಕರಣ ದಾಖಲಾಗಿರುತ್ತದೆ.
ಸಂಜೆ ಪಿತ್ಯಾದಿಯ ಅಣ್ಣನ ಮಗಳು ಪಿರಾದಿಯವರಿಗೆ ಅಪರಿಚಿತರು ಮುರಿದಿರುತ್ತಾರೆ ಎಂದು ತಿಳಿಸಿರುತ್ತಾರೆ. ಯಾರೋ ಕಳ್ಳರು ಮನೆಯ ಬೀಗವನ್ನು ಮುರಿದು ಒಡವೆಗಳು ಮತ್ತು ಬೆಳ್ಳಿಯ ವಸ್ತುಗಳನ್ನು ಕಳ್ಳತನ ಕುರಿತು ಮಡಿವಾಳ ಪೊಲೀಸ್ ಠಾಣೆಯಲ್ಲಿ ಕಳ್ಳತನ
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಭಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ ದಿನಾಂಕ:20.01.2025 ರಂದು ಮಡಿವಾಳ ಠಾಣಾ ವ್ಯಾಪ್ತಿಯ ಮಾರುಕಟ್ಟೆಯ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ತನ್ನ ಸಹಚರನೊಂದಿಗೆ ಸೇರಿಕೊಂಡು ಈ ಪ್ರಕರಣದಲ್ಲಿ ಕಳ್ಳತನ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:20.01.2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ 13 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಿ, ಆರೋಪಿಯು ನೀಡಿದ ಮಾಹಿತಿಯ ಮೇರೆಗೆ ದಿನಾಂಕ:21.01.2025 ರಂದು ಬೆಂಗಳೂರು ನಗರ, ಕೋರಮಂಗಲದ ವೆಂಕಟರೆಡ್ಡಿ ಲೇಔಟ್‌ನಲ್ಲಿರುವ ಪಿಜಿಯೊಂದರಲ್ಲಿ ಕೃತ್ಯಕ್ಕೆ ಉಪಯೋಗಿಸಿದ್ದ ಕಬ್ಬಿಣದ ರಾಡ್ ಮತ್ತು ಮನೆಯ ಬೀಗ [ಲಾಕ್ ಪಾಟ್) ನ್ನು ಇಟ್ಟಿರುವದಾಗಿ ತಿಳಿಸಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದಲ್ಲಿ ಕಳವು ಮಾಡಿದ್ದ. ಚಿನ್ನಾಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿಯಾಗಿ ಮಾರ್ಪಡಿಸಿ, ಹಾಗೂ ಬೆಳ್ಳಿಯ ವಸ್ತುಗಳನ್ನು ತನ್ನ ಸ್ವಂತ ಊರಾದ ಮಹರಾಷ್ಟ್ರದ ಸೊಲ್ಲಾಪುರದ ವಾಸದ ಮನೆಯಲ್ಲಿ ಇಟ್ಟಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:27.01.2025 ರಂದು ಆರೋಪಿಯ ವಾಸದ ಮನೆಯಿಂದ 181 ಗ್ರಾಂ ತೂಕದ ಚಿನ್ನದ ಗಟ್ಟಿ, 333 ಗ್ರಾಂತೂಕದ ಬೆಳ್ಳಿಯ ವಸ್ತುಗಳು, ಚಿನ್ನದ ಗಟ್ಟಿಯನ್ನು ಮಾಡಲು ಉಪಯೋಗಿಸಿದ ಒಂದು ಫೈರ್‌ಗನ್ ಮತ್ತು ಮೂಸ್ ಇವುಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ * 12.25 ಲಕ್ಷ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊರ್ವ ಸಹಚರನು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.
00:31.01.2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ, ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಸಾರಾ ಫಾತಿಮಾ, ಐ.ಪಿ.ಎಸ್, ರವರು ಮತ್ತು ಮಡಿವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀನಾರಾಯಣ ಕೆ.ಸಿ. ರವರುಗಳ ಮಾರ್ಗದರ್ಶನದಲ್ಲಿ, ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ಮೊಹಮ್ಮದ್ ಎಂ.ಎ. ರವರು ಮತ್ತು ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









