ಎಂ.ಕೆ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗವಾರ ಗ್ರಾಮದ ದೂರುದಾರರ ಮನೆಯಲ್ಲಿ ತಮ್ಮ ಉಪಯೋಗಕ್ಕೆಂದು ಇಟ್ಟುಕೊಂಡಿದ್ದ, ಸುಮಾರು 2,40,000/- ರೂ ಮೌಲ್ಯದ 53 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಕಳ್ಳರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ ಎಂ.ಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಮೊ.ಸಂ:13/2025 ಕಲಂ: 305 ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಸದರಿ ಪ್ರಕರಣದಲ್ಲಿ ತನಿಖೆ ಮುಂದುವರಿಸಿ, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಯ ಪತ್ತೆಯ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ, ದಿನಾಂಕ:09.02.2025 ರಂದು ಓರ್ವ ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಸದರಿ ಆರೋಪಿಯು ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಸಂಸ್ಥೆಯೊಂದಕ್ಕೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ನಂತರ ಮುಂದಿನ ಕಾನೂನು ಕ್ರಮ ಜರುಗಿಸಿ ಚಿನ್ನದ ಗಟ್ಟಿ ಮತ್ತು ಆಭರಣಗಳನ್ನು ಸೇರಿ, ಒಟ್ಟು 51.80 ಗ್ರಾಂ ಚಿನ್ನವನ್ನು ಅಮಾನತ್ತು ಪಡಿಸಿಕೊಂಡು, ಪ್ರಕರಣವನ್ನು ಪತ್ತೆ ಮಾಡುವಲ್ಲಿ ಎಂ.ಕೆ ದೊಡ್ಡಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ.








