ಬೇಗೂರು ಠಾಣಾ ಸರಹದ್ದಿನಯ ಬೇಗೂರು ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯು ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಕಡಿಮೆ ಬೆಲೆಗೆ ಮಾದಕ ದ್ರವ್ಯಗಳನ್ನು ತರಿಸಿಕೊಂಡು ಪರಿಚಯಸ್ಥ ಮತ್ತು ಸಾರ್ವಜನಿಕರಿಗೆ ಮಾರುತ್ತಿದ್ದನು. ಈತನ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂಧಿತನಿಂದ 3 ಕೆಜಿ 300 ಗ್ರಾಂ ಗಾಂಜಾ, ಒಂದು ಪ್ಲಾಸ್ಟಿಕ್ ಚೀಲ ಮತ್ತು 17 ಪ್ಲಾಸ್ಟಿಕ್ ಕವರ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 1,20, 000ರೂ. ಎಂದು ಅಂದಾಜು ಮಾಡಲಾಗಿದೆ.

ಈ ಕಾರ್ಯಾಚರಣೆಯನ್ನು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ.ಸಾರಾ ಫಾತಿಮ ಐಪಿಎಸ್ ಇವರ ಮಾರ್ಗದರ್ಶನದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರವರಾದ ಶ್ರೀ. ಕೆ ಎನ್ ಸತೀಶ ರವರ ನೇತೃತ್ವದಲ್ಲಿ, ಬೇಗೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಕೃಷ್ಣಕುಮಾರ್ ಪಿ ಎಸ್ಮತ್ತಿವರ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್








