ವೈಟ್ ಫೀಲ್ಡ್ ಪೊಲೀಸ್ ಠಾಣಾ, ಸರಹದ್ದಿನ ಇಮ್ಮಡಿಹಳ್ಳಿಯಲ್ಲಿ ವಾಸವಿರುವ ಪೆರ್ಯಾದುದಾರರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರವನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಅಪಾರ್ಟ್ಮೆಂಟ್ ಒಂದರ ಪಾರ್ಕಿಂಗ್ ನಲ್ಲಿ ದ್ವಿಚಕ್ರವಾಹನವನ್ನು ಬೆಳಿಗ್ಗೆ ನಿಲ್ಲಿಸಿದ್ದು ವಾಪಸ್ ಬಂದು ನೋಡಲಾಗಿ ಯಾರೋ ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನವನ್ನು ಕಳುವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದ ವೈಟ್ ಫೀಲ್ಡ್ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮಿದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ವರ್ತೂರಿನ ಮಧುರ ನಗರ ದಲ್ಲಿ ಓರ್ವ ವ್ಯಕ್ತಿಯನ್ನು ಆತನ ಮನೆಯಿಂದ ಪ್ರಕರಣದಲ್ಲಿ ಕಳುವಾಗಿದ್ದ ಒಂದು ದ್ವಿಚಕ್ರ ವಾಹನ ಸೇರಿದಂತೆ ಎರಡು ದ್ವಿಚಕ್ರ ವಾಹನಗಳ ಸಮೇತ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ದ್ವಿಚಕ್ರ ವಾಹನವನ್ನು ಕಳುವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ ಹಾಗೂ ಬೆಂಗಳೂರು ನಗರ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ಆರೋಪಿಯನ್ನು ವಿಚಾರಣೆ ಮಾಡಲಾಗಿ ಕಳವು ಮಾಡಿದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಸಲುವಾಗಿ ಠಾಣಾ ಸರಹದ್ದಿನ ಮಧುರ ನಗರದ ಪಕ್ಕದ ರಸ್ತೆಯ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು 8 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟು 10 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಇವುಗಳ ಒಟ್ಟು ಮೌಲ್ಯ 7,00,000/- ರೂಪಾಯಿಗಳಾಗಿರುತ್ತದೆ.
ಈ ಪ್ರಕರಣದ ಆರೋಪಿಯ ಬಂದನದಿಂದ ವೈಟ್ ಫೀಲ್ಡ್ ಪೊಲೀಸ್ ಠಾಣೆಯ ಎರಡು ದ್ವಿಚಕ್ರ ವಾಹನ ಕಳವು ಪ್ರಕರಣ ಪತ್ತೆಯಾಗಿದ್ದು ಉಳಿದ ಎಂಟು ದ್ವಿಚಕ್ರ ವಾಹನಗಳ ಮಾಲೀಕರು ಪತ್ತೆ ಆಗಬೇಕಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ಡಾಕ್ಟರ್ ಶಿವಕುಮಾರ್ ಗುಣರೆ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು ಉಪ ವಿಭಾಗ ಶ್ರೀಮತಿ ರೀನಾ ಸುವರ್ಣ, ರವರ ಮಾರ್ಗದರ್ಶನದಲ್ಲಿ ವೈಟ್ಫೀಲ್ಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ಎ ಹಾಗೂ ಅಧಿಕಾರಿ ಸಿಬ್ಬಂದಿಯವರು ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ









