ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿ ರಸ್ತೆಯಲ್ಲಿ ಪಿರ್ಯಾದುದಾರರು ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಆಸಾಮಿಗಳು ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿದ್ದು, ಈ ಸಂಬಂಧ ದೂರುದಾರರು ನೀಡಿದ ದೂರಿನ ಮೇರೆಗೆ ಕಗ್ಗಲೀಪುರ ಪೊಲೀಸ್ ಠಾಣಾ ಮೊ.ಸಂ: 107/2025 ಕಲಂ: 309(4), 317(4), 317(5) BNS ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ
ಸದರಿ ಪ್ರಕರಣದಲ್ಲಿ ತನಿಖೆ ಕೈಗೊಂಡು, ಆರೋಪಿಗಳ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ, ಒಟ್ಟು ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆರೋಪಿಗಳಿಂದ ಸುಮಾರು 1.5 ಲಕ್ಷ ರೂ ಮೌಲ್ಯದ 26 ಗ್ರಾಂ 2 ಚಿನ್ನದ ಸರಗಳು ಹಾಗೂ ಒಂದು ದ್ವಿಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು ಸದರಿ ಪ್ರಕರಣದ ಜೊತೆಗೆ ಕಗ್ಗಲೀಪುರ ಪೊಲೀಸ್ ಠಾಣೆಯ ಮೊ.ಸಂ: 124/2025 ಕಲಂ : 309(4), 317(4), 317(5) ರೀತ್ಯಾ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಕಗ್ಗಲೀಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ.









