ಅಮೃತಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:29/04/2025 ರಂದು ಸಂಜೆ ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಠಾಣಾ ಸರಹದ್ದಿನ ಅಮೃತಹಳ್ಳಿಯ ವರ್ಮಾ ಲೇಔಟ್ನ ಖಾಲಿ ಜಾಗದಲ್ಲಿ ಓರ್ವ ವ್ಯಕ್ತಿಯು ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಯವಕರಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿಯಲ್ಲಿ ತಿಳಿಸಿರುತ್ತಾರೆ. ಈ ಮಾಹಿತಿಯನ್ನಾಧರಿಸಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ನಂತರ ಬಾತ್ಮಿದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ಮಾಡಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಓಡಿಸ್ಸಾ ರಾಜ್ಯದಿಂದ ಕಡಿಮೆ ಬೆಲೆಗೆ ನಿಷೇದಿತ ಮಾದಕ ವಸ್ತುವಾದ ಗಾಂಜಾನ್ನು ಖರೀದಿ ಮಾಡಿಕೊಂಡು, ಬೆಂಗಳೂರಿಗೆ ತಂದು, ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಧಿಕ ಲಾಭ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಈತನ ವಶದಲ್ಲಿದ್ದ 5 ಕೆ.ಜಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಮೌಲ್ಯ 5,00,000/-(ಐದು ಲಕ್ಷ ರೂಪಾಯಿ).
ದಿನಾಂಕ:30/04/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 3 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದು ಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಿ ಆರೋಪಿಯನ್ನು ದಿನಾಂಕ:02/05/2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು, ಈಶಾನ್ಯ ವಿಭಾಗ ಶ್ರೀ.ಸಜೀತ್.ಐ.ಪಿ.ಎಸ್, ಸಹಾಯಕ ಪೊಲೀಸ್ ಆಯುಕ್ತರು, ಸಂಪಿಗೇಹಳ್ಳಿ ಉಪ ವಿಭಾಗ ಶ್ರೀ.ಮುರುಗೇಂದ್ರಯ್ಯ ರವರ ಮಾರ್ಗದರ್ಶನದಲ್ಲಿ ಅಮೃತಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಅಂಬರೀಶ್.ಎಂ ಹಾಗೂ ಅಧಿಕಾರಿ/ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









