ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣನಗರ ಮೂರನೇ ಬ್ಲಾಕ್ ನಲ್ಲಿ ಮನೆ ಕಳ್ಳತನವಾಗಿರುವ ಬಗ್ಗೆ ಪಿರಿಯಾದುದಾರರು ದೂರನ್ನು ಸಲ್ಲಿಸಿರುತ್ತಾರೆ
ಪಿರ್ಯಾದುದಾರರು ಕೆಲಸದ ನಿಮಿತ್ತ ಚೆನ್ನೈಗೆ ತೆರಳಿದ್ದು ವಾಪಸ್ ಮನೆಗೆ ಬಂದು ನೋಡಲಾಗಿ ಮನೆಯ ಬಾಗಿಲಿನ ಡೋರ್ ತೆರೆದಿದ್ದು ಮನೆಯ ಒಳಗೆ ಪ್ರವೇಶಿಸಿ ನೋಡಲಾಗಿ ಕೊಠಡಿಯ ಬೀರುವಿನ ಬಾಗಿಲನ್ನು ಮೀಟಿ ಚಿನ್ನಾಭರಣ ಬೆಳ್ಳಿ ವಸ್ತುಗಳು ಹಾಗೂ ವಾಚುಗಳನ್ನು ಯಾರೋ ಅಪರಿಚಿತರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ
ಈ ಪ್ರಕರಣದ ತನಿಖೆಯನ್ನು ಮುಂದುವರಿಸಿದ ಬಾಣಸವಾಡಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆಹಾಕಿ ರಾಮಮೂರ್ತಿನಗರ ಪೊಲೀಸ್ ಠಾಣಾ ಸರಹದ್ದಿನ ಕಲ್ಕೆರೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿ ಕಳ್ಳತನ ಮಾಡಿರೋದು ತಪ್ಪು ಒಪ್ಪಿಕೊಂಡಿರುತ್ತಾರೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರೆ ಇಬ್ಬರೂ ಸಹಚರರ ಬಗ್ಗೆ ಮಾಹಿತಿಯನ್ನು ನೀಡಿರುತ್ತಾರೆ

ಸುದೀರ್ಘವಾಗಿ ಆರೋಪಿಗಳನ್ನು ವಿಚಾರಣೆ ಮಾಡಿದ ಪೊಲೀಸರು ಓರ್ವ ಆರೋಪಿ ವಾಸದ ಮನೆಯಿಂದ 75 ಗ್ರಾಂ ಚಿನ್ನಾಭರಣ ಮತ್ತು ಮತ್ತೊಬ್ಬ ಆರೋಪಿ ಮನೆಯಿಂದ 42 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ
ಈ ಪ್ರಕರಣದ ಆರೋಪಿಗಳಿಬ್ಬರ ಬಂಧನದಿಂದ 10 ಲಕ್ಷ ರೂಪಾಯಿ ಮೌಲ್ಯದ 117 ಗ್ರಾಂ ಚಿನ್ನಾಭರಣಗಳನ್ನು ಬಾಣಸವಾಡಿ ಪೊಲೀಸರು ವಶಪಡಿಸಿಕೊಂಡಿರುತ್ತಾರೆ
ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಕಮಿಷನರ್ ದೇವರಾಜ್ ಐಪಿಎಸ್ ಮತ್ತು ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಉಮಾಶಂಕರ್ ಎಂ ಎಚ್ ರವರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಬಾಣಸವಾಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ಹಾಗೂ ಸಿಬ್ಬಂದಿ ರವರನ್ನು ಶ್ಲಾಘಿಸಿರುತ್ತಾರೆ.
ವರದಿ
ಶಶಿಕುಮಾರ್ ವಿ









