ಮಾನ್ಯ ಶ್ರೀ ಪ್ರದೀಪ್ ಗುಂಟಿ ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು ಬೀದರ, ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬೀದರ ಖಟಕ ಚಿಂಚೋಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದ ಪತ್ತೆ ಕುರಿತು ಶ್ರೀ ಚಂದ್ರಕಾಂತ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಬೀದರ, ರವರ ಮುಂದಾಳತ್ವದಲ್ಲಿ ಶ್ರೀ ಶಿವಾನಂದ ಪವಾಡಶೆಟ್ಟಿ, ಪೊಲೀಸ್ ಉಪಾಧೀಕ್ಷಕರು ಭಾಲ್ಕಿ ರವರ ನೇತೃತ್ವದಲ್ಲಿ ಭಾಲ್ಕಿ ಗ್ರಾಮೀಣ ವೃತ್ತದ ಸಿ.ಪಿ.ಐ ಶ್ರೀ ಹನುಮರೆಡ್ಡೆಪ್ಪ ಶ್ರೀ ಸುದರ್ಶನರೆಡ್ಡಿ, ಪಿಎಸ್ಐ ಖಟಕಚಿಂಚೊಳಿ ಮತ್ತು ಸಿಬ್ಬಂದಿರವರಾದ ಶ್ರೀ ಅಕ್ಮಲಪಾಶಾ, ಶ್ರೀ ಸ್ವಾಮಿದಾಸ, ಶ್ರೀ ಪ್ರಕಾಶ ರವರನ್ನೊಳಗೊಂಡ ತಂಡವನ್ನು ರಚಿಸಿದ್ದು, ತಂಡವು ಸಿ.ಸಿ ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ, ಪೊಲೀಸ್ ಬಾತ್ಮಿದಾರರಿಂದ ಪಡೆದ ಮಾಹಿತಿ ಆಧಾರದ ಮೇರಗೆ ಆರೋಪಿತರನ್ನು ವಶಕ್ಕೆ ಪಡೆದು ಅವರಿಂದ ಒಂದು ಕಾರ ಅ:ಕಿ: 5,00,000=00 ರೂಪಾಯಿ ನಗದು ಹಣ 68,000=00 ಹೀಗೆ ಒಟ್ಟು ಅ:ಕಿ: 5,68,000=00 ಬೆಲೆ ಬಾಳುವ ಸ್ವತ್ತನ್ನು ವಶ ಪಡಿಸಿಕೊಂಡು ಆರೋಪಿತರ ವಿರುದ್ದ ಕಾನೂನು ರಿತ್ಯ ಕ್ರಮ ಕೈಗೊಳ್ಳಲಾಗಿದೆ.
ಅತೀ ಚಾಕ ಚಾಕತ್ಯೆಯಿಂದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.
ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ, ಪತ್ತೆ ಕಾರ್ಯ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಸದಾ ಮುಂದುವರೆಯುತ್ತದೆ…









