ಮಾನ್ಯ ಶ್ರೀ ಪ್ರದೀಪ್ ಗುಂಟಿ ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು ಬೀದರ, ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬೀದರ ಗಾಂಧಿಗಂಜ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದ ಪತ್ತೆ ಕುರಿತು ಶ್ರೀ ಚಂದ್ರಕಾಂತ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಬೀದರ, ರವರ ಮುಂದಾಳತ್ವದಲ್ಲಿ ಶ್ರೀ ಶಿವನಗೌಡಾ ಪಾಟೀಲ, ಪೊಲೀಸ್ ಉಪಾಧೀಕ್ಷಕರು ಬೀದರ ರವರ ನೇತೃತ್ವದಲ್ಲಿ ಗಾಂಧಿಗಂಜ ಪೊಲೀಸ್ ಠಾಣೆಯ ಪಿ.ಐ ಶ್ರೀ ಆನಂದರಾವ, ಶ್ರೀ ನವೀನ್, ಶ್ರೀ ಅನೀಲ್, ಶ್ರೀ ಇರ್ಫಾನ್, ಶ್ರೀ ಗಂಗಾಧರ, ಶ್ರೀ ಸುಧಾಕರ, ಶ್ರೀ ರಾಜಕುಮಾರ, ಶ್ರೀ ದೀಪಕ ರವರನ್ನೊಳಗೊಂಡ ತಂಡವನ್ನು ರಚಿಸಿದ್ದು, ತಂಡವು ಸಿ.ಸಿ ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ, ಪೊಲೀಸ್ ಬಾತ್ಮಿದಾರರಿಂದ ಪಡೆದ ಮಾಹಿತಿ ಆಧಾರದ ಮೇರಗೆ ಆರೋಪಿತರನ್ನು ವಶಕ್ಕೆ ಪಡೆದು ಅವರಿಂದ ನಗದು ಹಣ 20,000=00, 115 ಗ್ರಾಂ ಬಂಗಾರ, 480 ಗ್ರಾಂ ಬೆಳ್ಳಿಯ ವಸ್ತುಗಳು ಮತ್ತು ಒಂದು ಮೊಟಾರ ಸೈಕಲ್ 90,000=00 ರೂ ಹೀಗೆ ಒಟ್ಟು 11,73,800=00 ರೂಪಾಯಿ ಬೆಲೆಬಾಳುವುಗಳನ್ನು ವಶ ಪಡಿಸಿಕೊಂಡು ಆರೋಪಿತರ ವಿರುದ್ದ ಕಾನೂನು ರಿತ್ಯ ಕ್ರಮ ಕೈಗೊಳ್ಳಲಾಗಿದೆ.
ಅತೀ ಚಾಕ ಚಾಕತ್ಯೆಯಿಂದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.
ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ, ಪತ್ತೆ ಕಾರ್ಯ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಸದಾ ಮುಂದುವರೆಯುತ್ತದೆ…









