ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಖಚಿತ ಮಾಹಿತಿ ಎಂದು ದೊರೆತಿರುತ್ತದೆ
ಮಾಹಿತಿಯಲ್ಲಿ ಬೆಂಗಳೂರು ನಗರದ ಅವಲಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೆ ದೊಮ್ಮಸಂದ್ರ ಗ್ರಾಮದ ಮನೆ ಒಂದರಲ್ಲಿ ವಾಸವಿರುವ ವಿದೇಶಿ ಪ್ರಜೆಯೊರ್ವನು ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ
ಈ ಮಾಹಿತಿ ಆಧಾರದ ಮೇರೆಗೆ ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ಅವಲಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ, ನಂತರ ಸಿಸಿಬಿ ಅಧಿಕಾರಿಗಳು ಮತ್ತು ಅವಲಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಜಂಟಿಯಾಗಿ ಬಾತ್ಮಿದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ನಡೆಸಿ ಓರ್ವ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದುಕೊಂಡರು
ಆತನ ವಶದಲ್ಲಿದ್ದ 600 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಬಿಳಿ ಬಣ್ಣದ ಎಂ.ಡಿ.ಎಂ.ಎ ಕ್ರಿಸ್ತಲ್ ಗಳನ್ನು ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ ₹1,20,00,000/-(ಒಂದು ಕೋಟಿ ಇಪ್ಪತ್ತು ಲಕ್ಷ ರೂಪಾಯಿ).
ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮೂರು ದಿನಗಳ ಕಾಲ ಪೊಲೀಸ್ ಅಭಿ ರಕ್ಷೆಗೆ ಪಡೆಯಲಾಯಿತು.
ಆರೋಪಿಯನ್ನು ಪ್ರಶ್ನಿಸಲಾಗಿ, ಆತನು ಪರಿಚಯವಿಲ್ಲದವರಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುವಾದ ಬಿಳಿ ಬಣ್ಣದ ಎಂ.ಡಿ.ಎಂ.ಎ ಕ್ರಿಸ್ಟಲ್ ಗಳನ್ನು ಖರೀದಿಸಿದ್ದು, ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಕ್ರಮವಾಗಿ ಲಾಭವನ್ನು ಗಳಿಸುತ್ತಿದ್ದುದ್ದಾಗಿ ತಿಳಿಸಿರುತ್ತಾನೆ.
ದಿನಾಂಕ 16/06/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ, ಸಿಬ್ಬಂದಿಗಳು ಹಾಗೂ ಅವಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.









