ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ವಿದೇಶಿ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ಇಬ್ಬರ ವಿದೇಶಿ ಪ್ರಜೆಗಳ ಪೈಕಿ ಓರ್ವ ಆರೋಪಿಯ ವಿರುದ್ಧ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಒಂದು ಪ್ರಕರಣ ಸೇರಿದಂತೆ, ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಮತ್ತೋರ್ವ ಆರೋಪಿತೆಯ ವಿರುದ್ಧ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ. ಅಲ್ಲದೆ ತಲೆಮರಿಸಿಕೊಂಡಿದ್ದ ಇತರೆ ಮೂವರು ವಿದೇಶಿ ಪ್ರಜೆಗಳನ್ನು ಸಹ ಪತ್ತೆ ಮಾಡಿ, ಸಂಬಂಧಪಟ್ಟ ಠಾಣೆಗಳಿಗೆ ಮುಂದಿನ ಕಾನೂನು ಕ್ರಮಕ್ಕಾಗಿ ಒಪ್ಪಿಸಲಾಗಿದೆ.
ಕಾರ್ಯಾಚರಣೆಯನ್ನು ಮುಂದುವರಿಸಿ, ನಾಲ್ವರು ವಿದೇಶಿ ಪ್ರಜೆಗಳು ಯಾವುದೇ ದಾಖಲಾತಿಗಳನ್ನು ಹಾಜರು ಪಡಿಸದ ಕಾರಣ, ಭಾರತದಲ್ಲಿ ಅಕ್ರಮವಾಗಿ ವಾಸವಾಗಿರುವುದರೆಂದು, ಅವರುಗಳನ್ನು ವಿದೇಶಿ ಬಂಧನದ ಕೇಂದ್ರಕ್ಕೆ (detention centre) ಕಳುಹಿಸಲಾಗಿದೆ.
ಇಬ್ಬರು ವಿದೇಶಿ ಪ್ರಜೆಗಳು ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ಬೆಂಗಳೂರು ನಗರದಲ್ಲಿ ನೆಲೆಸಿದ್ದರಿಂದ ಅವರುಗಳನ್ನು ದೇಶದಿಂದ ಗಡಿಪಾರು (deportation) ಮಾಡಲು ಎಫ್ ಆರ್ ಓ ರವರ ಮುಂದೆ ಮುಂದಿನ ಕಾನೂನು ಕ್ರಮಕ್ಕಾಗಿ ಹಾಜರುಪಡಿಸಲಾಗಿದೆ
ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಭೇದಿಸಿರುತ್ತಾರೆ.
ವರದಿ
ಶಶಿಕುಮಾರ್ ವಿ








