ಬೆಂಗಳೂರು ನಗರ ಪೊಲೀಸ್ ಆಯುಕ್ತರವರಿಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ, ಪಶ್ಚಿಮ ವಲಯ ಪೊಲೀಸರು ನಗರದ ವಿವಿಧ ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ವಿಶೇಷ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ನಿಯಮ ಉಲ್ಲಂಘನೆಗಳು:-
19 ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ನಿಯಮ ಉಲ್ಲಂಘನೆಗಳು ಕಂಡುಬಂದಿವೆ.
ಮಹಿಳಾ ಕೆಲಸಗಾರ್ತಿಯರಿಂದ ಪ್ರಚೋದನಾಕಾರಿಯ ಉಡುಪು ಧರಿಸಿರುವುದು.
ಮಹಿಳಾ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳದಿರುವುದು.
ಅಡುಗೆ ಕೋಣೆಯಲ್ಲಿ ಶುಚಿತ್ವ ಪಾಲಿಸದಿರುವುದು.
ನಿಗದಿತ ಧೂಮಪಾನ ವಲಯ ಗುರುತಿಸದೆ ಇರುವುದು.
ಅವಧಿ ಮೀರಿ ವ್ಯಾಪಾರ ವಹಿವಾಟು ನಿಯಮಗಳ ಉಲ್ಲಂಘನೆ.
ಕ್ರಮಗಳು:-
ನಿಯಮ ಉಲ್ಲಂಘಿಸಿದ ಗ್ರಾಹಕರಿಗೆ ದಂಡ ವಿಧಿಸಲಾಗಿದೆ.
ಬಾರ್ ಮತ್ತು ರೆಸ್ಟೋರೆಂಟ್ಗಳ ಮಾಲೀಕರ ವಿರುದ್ಧ ಕಾನೂನು ಕ್ರಮಕ್ಕಾಗಿ ಪೊಲೀಸ್ ಠಾಣೆಗಳಿಗೆ ವರದಿ ನೀಡಲಾಗಿದೆ.
ಮುಂದೆಯೂ ನಿಯಮ ಉಲ್ಲಂಘನೆ ಮಾಡುವ ವಾಣಿಜ್ಯ ಕೇಂದ್ರಗಳ ಮೇಲೆ ನಿಗಾ ಇರಿಸಲಾಗುವುದು.
ಪರವಾನಿಗೆ ರದ್ದುಗೊಳಿಸುವ ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರಿಗೆ ಮನವಿ : ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾದಲ್ಲಿ 112 ಸಹಾಯವಾಣಿಗೆ ಕರೆಮಾಡಿ ಮಾಹಿತಿ ನೀಡಬಹುದು. ಮಾಹಿತಿ ನೀಡಿದ ಸಾರ್ವಜನಿಕರ ಗುರುತು ಗೌಪ್ಯವಾಗಿ ಇಡಲಾಗುವುದು.
ಕಾರ್ಯಾಚರಣೆಯ ನೇತೃತ್ವ ವಹಿಸಿದ ಬೆಂಗಳೂರು ನಗರ ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರಾದ ಶ್ರೀ ಸಿ. ವಂಶಿಕೃಷ್ಣ, ಐ.ಪಿ.ಎಸ್, ರವರ ಮಾರ್ಗದರ್ಶನದಲ್ಲಿ ಶ್ರೀ. ಎಸ್. ಗಿರೀಶ್, ಐ.ಪಿ.ಎಸ್. ಉಪ ಪೊಲೀಸ್ ಆಯುಕ್ತರು ಪಶ್ಚಿಮ ವಿಭಾಗರವರ ನೇತೃತ್ವದಲ್ಲಿ, ಕೇಂದ್ರ ಮತ್ತು ಪಶ್ಚಿಮ ವಿಭಾಗದ ಅಧಿಕಾರಿ/ಸಿಬ್ಬಂದಿಯವರನ್ನೊಳಗೊಂಡ 11 ವಿಶೇಷ ಪೊಲೀಸ್ ತಂಡದವರು ನಡೆಸಿರುತ್ತಾರೆ.
ವರದಿ : ಸಂಪಾದಕರು ಆಂಟೋನಿ









