ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ಸರಹದ್ದಿನ ನಾಗನಾಥಪುರದಲ್ಲಿ ವಾಸವಿರುವ ಪಿರಿಯಾದುದಾರರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ.
ದೂರಿನಲ್ಲಿ ಪಿರ್ಯಾದುದಾರರು ಮೊಬೈಲ್ ಫೋನನ್ನು ಮನೆಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನದ ಮೇಲಿಟ್ಟು, ಮರೆತು ವಾಕಿಂಗ್ ಹೋಗಿದ್ದು, ಆ ಸಮಯದಲ್ಲಿ ಯಾರೋ ಅಪರಿಚಿತರು ಮೊಬೈಲ್ ಫೋನನ್ನು ಕಳುವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಫೋನ್ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮಿದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ ಎಲೆಕ್ಟ್ರಾನಿಕ್ ಸಿಟಿ ಫೇಸ್-2, ಸೀಸನ್ ಹೋಟೆಲ್ ಹತ್ತಿರ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದಲ್ಲಿ ಮೊಬೈಲ್ ಫೋನ್ ಕಳವು ಮಾಡಿರುವುದಾಗಿ ಹಾಗೂ ನಾಗನಾಥಪುರದಲ್ಲಿರುವ ಮನೆ ಒಂದರಲ್ಲಿ ಚಿನ್ನದ ಓಲೆ ಮತ್ತು ಬಿ.ಎಂ.ಟಿ.ಸಿ ಬಸ್ ನಲ್ಲಿ ಮೆಜೆಸ್ಟಿಕ್ ನಿಂದ ಸಿಂಗಸಂದ್ರ ಕಡೆಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬ್ಯಾಗಿನಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿರುವುದಾಗಿ ಮತ್ತು ಬೆಂಗಳೂರಿನ ವಿವಿಧ ಕಡೆ ಮನೆಗಳಲ್ಲಿ ಮೊಬೈಲ್ ಫೋನ್ ಗಳನ್ನು ಕಳವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ.
ಆರೋಪಿತನ ವಶದಲ್ಲಿದ್ದ 26 ಮೊಬೈಲ್ ಫೋನ್ ಗಳು, ಒಂದು ಚಿನ್ನದ ಸರ ಹಾಗೂ ಒಂದು ಜೊತೆ ಚಿನ್ನದ ಓಲೆಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು
ಒಟ್ಟಾರೆ ಆರೋಪಿಯ ಬಂಧನದಿಂದ 10ಲಕ್ಷ ಮೌಲ್ಯದ 51 ಗ್ರಾಂ ಚಿನ್ನಾಭರಣ ಹಾಗೂ 26 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ
ಈ ಪ್ರಕರಣದ ಆರೋಪಿಯ ಬಂದನದಿಂದ 1) ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ-01 ಮನೆ ಕಳವು ಪ್ರಕರಣ ಮತ್ತು ಮೊಬೈಲ್ ಫೋನ್ ಕಳವು ಪ್ರಕರಣ ಸೇರಿದಂತೆ ಒಟ್ಟು ಎರಡು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 25 ಮೊಬೈಲ್ ಫೋನ್ಗಳ ಮಾಲೀಕರ ಪತ್ತೆ ಕಾರ್ಯ ಮುಂದುವರಿದಿರುತ್ತದೆ
ಈ ಕಾರ್ಯಾಚರಣೆಯನ್ನು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ನಾರಾಯಣ. ಎಂ ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಸತೀಶ್ರವರ ನೇತೃತ್ವದಲ್ಲಿ, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಸತೀಶ್. ಬಿ. ಎಸ್ ರವರ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ
ಶಶಿಕುಮಾರ್ ವಿ









