ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ 2006ನೇ ಸಾಲಿನಲ್ಲಿ ಕಳ್ಳತನ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಆರೋಪಿಯು ಮಾನ್ಯ ನ್ಯಾಯಾಲದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಮಾನ್ಯ ನ್ಯಾಯಾಲಯಯವು ಆರೋಪಿಯ ವಿರುದ್ಧ ಎಲ್.ಪಿ.ಆರ್ ಪ್ರಕರಣವೆಂದು ಪರಿಗಣಿಸಿ ಆರೋಪಿಯನ್ನು ಪತ್ತೆ ಮಾಡುವಂತೆ ಆದೇಶಿಸಿರುತ್ತದೆ.
ಪ್ರಕಣದಲ್ಲಿನ ಆರೋಪಿಯನ್ನು ಪತ್ತೆ ಮಾಡುವ ಸಂಬಂಧ, ಸಿದ್ದಾಪುರ ಪೊಲೀಸ್ ಇನ್ಸ್ಪೆಕ್ಟರ್ ರವರು ಒಂದು ವಿಶೇಷ ತಂಡವನ್ನು ರಚಿಸಿದ್ದು, ಆ ತಂಡದಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಾಂತ್ರಿಕ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ, ಬಾತ್ಮೀದಾರರನ್ನು ಭೇಟಿ ಮಾಡಿ ಬಾತ್ಮೀದಾರರ ಮಾಹಿತಿಯ ಮೇರೆಗೆ, ಆತನು ರಿಚ್‌ಮಂಡ್ ಸರ್ಕಲ್ ಬಳಿ ಇರುವ ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು, ದಿನಾಂಕ:07.06.2024 ರಂದು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು, ದಿನಾಂಕ:08/06/2024 ರಂದು ಆರೋಪಿಯನ್ನು ವರದಿಯೊಂದಿಗೆ ಮುಂದಿನ ಕ್ರಮಕ್ಕಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಲೊಕೇಶ್ ಭರಮಪ್ಪ ಜಗಲಾಸ ಮಾರ್ಗದರ್ಶನದಲ್ಲಿ, ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾರಾಯಣಸ್ವಾಮಿ.ವಿ ರವರ ನೇತೃತ್ವದಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.









