ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿಷಿದ್ಧ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ನಗದು, ತೂಕದ ಯಂತ್ರ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹ 2.30 ಕೋಟಿ ಎಂದು ಅಂದಾಜಿಸಲಾಗಿದೆ.
ಬಾಗಲೂರು ಗ್ರಾಮದ ಸಂತೆ ಸರ್ಕಲ್ನಿಂದ ಸಿಎಂಆರ್ ಕಾಲೇಜ್ಗೆ ಹೋಗುವ ರಸ್ತೆಯಲ್ಲಿ ಓರ್ವ ವಿದೇಶಿ ವ್ಯಕ್ತಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾನೆ ಎಂದು ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ದಾಳಿ ನಡೆಸಿ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ, ಆರೋಪಿಯು ಕಡಿಮೆ ಬೆಲೆಗೆ ಎಂಡಿಎಂಎ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾಗಿ ಒಪ್ಪಿಕೊಂಡಿದ್ದಾನೆ.
ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರು ಶ್ರೀ. ವಿ ಜೆ ಸಜೀತ್ಮತ್ತು ಸಂಪಿಗೆಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಮುರುಗೇಂದ್ರಯ್ಯ ಅವರ ನೇತೃತ್ವದಲ್ಲಿ ಬಾಗಲೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀ. ಶಬರೀಶ್ ವಿ ಎಸ್ ಮತ್ತು ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.ವರದಿ – ಮೋಹನ್ ಕುಮಾರ್ ಎಸ್ ನಾಯ್ಕ್









