ಮಾನ್ಯ ಪ್ರದೀಪ್ ಗುಂಟಿ ಐಪಿಎಸ್ ಪೊಲೀಸ್ ಅಧೀಕ್ಷಕರು ಬೀದರ ಜಿಲ್ಲೆ ರವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ, ಹುಮನಾಬಾದ ಸಂಚಾರಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ಹುಲೆಪ್ಪಾ, ರವರು ತಮ್ಮ ಸಿಬ್ಬಂದಿ ರವರೊಂದಿಗೆ ತಮ್ಮ ಸಿಬ್ಬಂದಿ ರವರೊಂದಿಗೆ ಹುಮನಾಬಾದ ಪಟ್ಟಣದ ಸಾರ್ಮಾಟ, ಐ.ಟಿ.ಐ ಕಾಲೇಜಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿರುತ್ತಾರೆ.
ಮಕ್ಕಳಲ್ಲಿ/ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಈಗಿನಿಂದಲೇ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ದಲ್ಲಿ ಅಪಘಾತದ ಪ್ರಮಾಣವನ್ನು ಇಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸ ಅಧಿಕಾರಿ, ಸಿಬ್ಬಂದಿ ರವರು ಸದಾ ಪ್ರಯತ್ನಿಸುತ್ತಿದ್ದು, ಅವರ ಪ್ರಯತ್ನವು ಪ್ರಸಂಶನಿಯವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಸಹಕರಿಸಲು ಕೋರಲಾಗಿದೆ.









