ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದಿದ್ದ ಭಾರೀ ಕನ್ನಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಬರೋಬ್ಬರಿ 1 ಕೋಟಿ 14 ಲಕ್ಷ ನಗದು ಮತ್ತು 16 ಗ್ರಾಂ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ. ಕಳವಿಗೆ ಬಳಸಿದ ಕಾರು ಸೇರಿ ಒಟ್ಟು 1.16 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹುಲಿಮಂಗಲ ಗ್ರಾಮದ ಅಪಾರ್ಟ್‌ಮೆಂಟ್ ಒಂದರಲ್ಲಿ ಕಳ್ಳತನ ನಡೆದಿತ್ತು. ಪೊಲೀಸರು ತನಿಖೆ ನಡೆಸಿ, ನಾಯಂಡಹಳ್ಳಿ ಸರ್ಕಲ್ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಎಂ ನಾರಾಯಣ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಕೆ.ಎಂ ಸತೀಶ್, ರವರ ನೇತೃತ್ವದಲ್ಲಿ, ಹೆಬ್ಬಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಸೋಮಶೇಖರ್ ಜಿ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡವು ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತದೆ.








