ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ವ್ಯಕ್ತಿಗಳನ್ನು ಬಂಧಿಸಿ, ದೊಡ್ಡ ಮೊಬೈಲ್ ಕಳವು ಜಾಲವನ್ನು ಭೇದಿಸಿದ್ದಾರೆ.
ಮೊಬೈಲ್ ಕಳವು ಮಾಡುತ್ತಿದ್ದ ಇಬ್ಬರು ಮತ್ತು ಕಳವು ಮಾಡಿದ ಫೋನ್‌ಗಳನ್ನು ಸ್ವೀಕರಿಸುತ್ತಿದ್ದ (ಖರೀದಿಸುತ್ತಿದ್ದ) ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರಿಂದ ಒಟ್ಟು 120 ಮೊಬೈಲ್ ಫೋನ್‌ಗಳು, ಕೃತ್ಯಕ್ಕೆ ಬಳಸಿದ ಒಂದು ದ್ವಿ-ಚಕ್ರ ವಾಹನ ಮತ್ತು ₹ 3,500 ನಗದು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ವಸ್ತುಗಳ ಒಟ್ಟು ಅಂದಾಜು ಮೌಲ್ಯ 18 ಲಕ್ಷ ಆಗಿದೆ.
ಆರೋಪಿಗಳ ಬಂಧನದಿಂದ ಗೋವಿಂದರಾಜನಗರ ಮತ್ತು ರಾಜಗೋಪಾಲ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಒಟ್ಟು 5 ಪ್ರಕರಣಗಳು ಪತ್ತೆಯಾಗಿವೆ.
ಉಳಿದ 119 ಮೊಬೈಲ್ ಫೋನ್‌ಗಳವಾರಸುದಾರರನ್ನು ಪತ್ತೆ ಮಾಡುವ ಕಾರ್ಯ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರು ಶ್ರೀ, ಗಿರೀಶ್, ಎಸ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ವಿಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಶ್ರೀ, ಚಂದನ್ ಕುಮಾರ್ ಎನ್. ರವರ ನೇತೃತ್ವದಲ್ಲಿ ಗೋವಿಂದರಾಜನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಸುಬ್ರಮಣಿ.ಕೆ. ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.







