ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಿಕುಪ್ಪೆ ಗ್ರಾಮದ ಮನೆಯೊಂದರ ಮುಂಭಾಗದಲ್ಲಿ ನಿಲ್ಲಿಸಿದ್ದ ವಾಹನದಲ್ಲಿದ್ದ 8 ಗ್ಯಾಸ್ ಸಿಲಿಂಡರ್ ಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವ ಕುರಿತು, ಪತ್ತೆ ಮಾಡಲು ಕೋರಿ ದೂರುದಾರರು ನೀಡಿದ ದೂರಿನ ಮೇರೆಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಮೊ. ಸಂ :76/2026, ಕಲಂ: 303(2) BNS ರೀತಿಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಗ್ಯಾಸ್ ಸಿಲಿಂಡರ್ ಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸುಮಾರು 58 ಸಾವಿರ ರೂ ಮೌಲ್ಯದ, 8 ಗ್ಯಾಸ್ ಸಿಲಿಂಡರ್ ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು, ಪ್ರಕರಣವನ್ನು ಪತ್ತೆ ಮಾಡುವಲ್ಲಿ ಬಿಡದಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿರುತ್ತಾರೆ.








