ದಿನಾಂಕ:27/10/2024 ರಂದು ರಾತ್ರಿ ಸಂಪಿಗೆಹಳ್ಳಿ ಪೊಲೀಸ್ ಠಾಣಾ ಸರಹದ್ದಿನ, ಸಂಪಿಗೆಹಳ್ಳಿ ಮುಖ್ಯರಸ್ತೆಯ ಎ.ಜೆ.ಬಿ.ಜೆ ಗೌಂಡ್ ಬಳಿ ಓರ್ವ ವ್ಯಕ್ತಿಯು ಮಾದಕ ವಸ್ತುವಾದ ಗಾಂಜಾವನ್ನು ದ್ವಿ-ಚಕ್ರ ವಾಹನದಲ್ಲಿರಿಸಿಕೊಂಡು, ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಬಾತ್ಮೀದಾರರಿಂದ ಖಚಿತ ಮಾಹಿತಿಯು ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದೊರೆತ್ತಿರುತ್ತದೆ.
ಈ ಮಾಹಿತಿಯನ್ನು ಆಧಾರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಬಾತ್ಮೀದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ ಓರ್ವ ವ್ಯಕ್ತಿಯನ್ನು ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಂಡಿರುತ್ತಾರೆ.
ವಶಕ್ಕೆ ಪಡೆದ ಆರೋಪಿಯ ಬಳಿಯಿಂದ 1 ಕೆ.ಜಿ 230 ಗ್ರಾಂ ನಿಷೇದಿತ ಮಾದಕವಸ್ತು ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ಒಂದು ದ್ವಿ-ಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಇವುಗಳ ಒಟ್ಟು ಮೌಲ್ಯ * 30,000/- (ಮೂವತ್ತು ಸಾವಿರರೂಪಾಯಿ).
ವಶಕ್ಕೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಆರೋಪಿಗೆ
ಸಾರಾಯಿಪಾಳ್ಯದಲ್ಲಿರುವ ಓರ್ವ ವ್ಯಕ್ತಿಯು ಕಡಿಮೆ ಬೆಲೆಗೆ ನಿಷೇದಿತ ಮಾದಕವಸ್ತು ಗಾಂಜಾವನ್ನು ನೀಡುತ್ತಿದ್ದು, ಅದನ್ನು ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾನೆ. ಆರೋಪಿತನಿಗೆ ಕಡಿಮೆ ಬೆಲೆ ಗಾಂಜಾವನ್ನು ನೀಡುತ್ತಿದ್ದ ವ್ಯಕ್ತಿಯು ತಲೆಮರೆಸಿಕೊಂಡಿದ್ದು, ಆತನ ಪತ್ತೆಕಾರ್ಯ ಮುಂದುವರೆದಿದೆ.
ದಿನಾಂಕ:28/10/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ. ಸಜೀತ್ ವಿ ಜೆ ಐ.ಪಿ.ಎಸ್‌ರವರ ಮಾರ್ಗದರ್ಶನದಲ್ಲಿ ಮತ್ತು ಸಂಪಿಗೆಹಳ್ಳಿ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಮುರಗೇಂದ್ರಯ್ಯ ರವರ ನೇತೃತ್ವದಲ್ಲಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟ ಶ್ರೀ ಚಂದ್ರಶೇಖರ್ ಎಂ. ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









