Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home J. JOHN PREM EDITOR

ಆಟೋರಿಕ್ಷಾ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
January 16, 2025
in J. JOHN PREM EDITOR,Latest News,Namma Police,Namma Police News
0
ಆಟೋರಿಕ್ಷಾ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ
0
SHARES
137
VIEWS
Share on FacebookShare on Twitter

08 ದ್ವಿ-ಚಕ್ರ ವಾಹನ ಮತ್ತು 02-ಆಟೋರಿಕ್ಷಾಗಳ ವಶ, ಮೌಲ್ಯ 13 ಲಕ್ಷ.
ಬೊಮ್ಮನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ದೇವರ ಚಿಕ್ಕನಹಳ್ಳಿಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:14/12/2024 ರಂದು ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ: 13/12/2024 ರಂದು ಮಡಿವಾಳದ ಡಾಲರ್ ಕಾಲೋನಿಯಲ್ಲಿರುವ ಪಿರಾದುದಾರರ ಸ್ನೇಹಿತನ ಮನೆಯ ಮುಂದೆ ದ್ವಿ- ಚಕ್ರ ವಾಹನವನ್ನು ನಿಲ್ಲಿಸಿ, ಸ್ನೇಹಿತನ ಮನೆಗೆ ಹೋಗಿರುತ್ತಾರೆ. ದಿನಾಂಕ:14/12/2024 ರಂದು ಮದ್ಯಾಹ್ನ ವಾಪಸ್ ಬಂದು ನೋಡಲಾಗಿ, ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಮಡಿವಾಳ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.


ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಭಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ, ದಿನಾಂಕ:27/12/2024 ರಂದು ಕೋರಮಂಗಲದ ವಾಟರ್ ಟ್ಯಾಂಕ್ ಸಿಗ್ನಲ್ ಬಳಿ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳ್ಳತನ ಮಾಡಿರುವುದಾಗಿ ತಪ್ಪಿಪ್ಪಿಕೊಂಡಿರುತ್ತಾನೆ. ಹಾಗೂ ಇಬ್ಬರು ಸಹಚರರೊಂದಿಗೆ ಸೇರಿಕೊಂಡು ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿಯೂ ದ್ವಿ-ಚಕ್ರ ವಾಹನ ಮತ್ತು ಆಟೋ ರಿಕ್ಷಾವನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:28/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 4 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಿ, ಆರೋಪಿಯು ನೀಡಿದ ಮಾಹಿತಿಯ ಮೇರೆಗೆ, ದಿನಾಂಕ:30/12/2024 ರಂದು ಮಡಿವಾಳದ ಸಿಲ್ಕ್ಬೋರ್ಡ್ ಬಳಿ ಇರುವ ದರ್ಗಾದ ಪಕ್ಕದ ರಸ್ತೆಯಲ್ಲಿ ಕಳವು ಮಾಡಿ ನಿಲ್ಲಿಸಿದ್ದ 05 ದ್ವಿ-ಚಕ್ರ ವಾಹನಗಳನ್ನು ಮತ್ತು 01 ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:30/12/2024 ರಂದು ಮಡಿವಾಳ ಮಾರುಕಟ್ಟೆ ರಸ್ತೆಯ ಪಕ್ಕದಲ್ಲಿ ಕಳವು ಮಾಡಿ ನಿಲ್ಲಿಸಿದ್ದ 02 ದ್ವಿ- ಚಕ್ರ ವಾಹನಗಳನ್ನು ಮತ್ತು 01 ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಯಿತು.


ಈ ಪ್ರಕರಣದ ಆರೋಪಿಯ ಬಂಧನದಿಂದ ಒಟ್ಟಾರೆ 08-ದ್ವಿ-ಚಕ್ರ ವಾಹನಗಳು ಮತ್ತು 02-ಆಟೋ ರಿಕ್ಷಾಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 13,00,000/-(ಹದಿಮೂರು ಲಕ್ಷ ರೂಪಾಯಿ).
ಈ ಪ್ರಕರಣದ ಆರೋಪಿಯ ಬಂಧನದಿಂದ ಮಡಿವಾಳ ಪೊಲೀಸ್ ಠಾಣೆಯ 02 ದ್ವಿ-ಚಕ್ರ ವಾಹನ ಮತ್ತು 02 ಆಟೋರಿಕ್ಷಾ ಕಳವು ಪ್ರಕರಣಗಳು ಪತ್ತೆಯಾಗಿರುತ್ತದೆ. ಉಳಿದ 06 ದ್ವಿ-ಚಕ್ರ ವಾಹನಗಳ ಮಾಲೀಕರು ಹಾಗೂ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪತ್ತೆಯಾಗಬೇಕಾಗಿದ್ದು, ತನಿಖೆ ಮುಂದುವರೆದಿದೆ.
ದಿನಾಂಕ:31/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ, ಆಗ್ನೆಯ ವಿಭಾಗದ ಉಪ ಪೊಲೀಸ್‌ ಆಯುಕ್ತರಾದ ಶ್ರೀಮತಿ ಸಾರಾ ಫಾತಿಮಾ, ಐ.ಪಿ.ಎಸ್ ರವರು ಮತ್ತು ಮಡಿವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀನಾರಾಯಣ ಕೆ.ಸಿ. ರವರುಗಳ ಮಾರ್ಗದರ್ಶನದಲ್ಲಿ, ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಮೊಹಮ್ಮದ್ ಎಂ.ಎ. ರವರ ಅಧಿಕಾರಿ ಸಬ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಸಿಬ್ಬಂದಿಗಳ ತಂಡ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka State PoliceLatest NewsMadiwala PoliceMadiwala Police StationNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ರಾಮನಗರ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

    ರಾಮನಗರ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

    ಬ್ಯಾಂಕ್‌ಗಳಿಂದ ಚಿನ್ನಾಭರಣ ಹಾಗೂ ಹಣವನ್ನು ಡ್ರಾ ಮಾಡಿಕೊಂಡು ಹೋಗುತ್ತಿರುವವರನ್ನು ಹಿಂಬಾಲಿಸಿ, ಹಣ ಹಾಗೂ ಚಿನ್ನಾಭರಣಗಳನ್ನು ದೋಚುತ್ತಿದ್ದ ಹೊರರಾಜ್ಯದ ಇಬ್ಬರು ವ್ಯಕ್ತಿಗಳ ಬಂಧನ.

    ಬ್ಯಾಂಕ್‌ಗಳಿಂದ ಚಿನ್ನಾಭರಣ ಹಾಗೂ ಹಣವನ್ನು ಡ್ರಾ ಮಾಡಿಕೊಂಡು ಹೋಗುತ್ತಿರುವವರನ್ನು ಹಿಂಬಾಲಿಸಿ, ಹಣ ಹಾಗೂ ಚಿನ್ನಾಭರಣಗಳನ್ನು ದೋಚುತ್ತಿದ್ದ ಹೊರರಾಜ್ಯದ ಇಬ್ಬರು ವ್ಯಕ್ತಿಗಳ ಬಂಧನ.

    ಹುಮನಾಬಾದ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

    ಹುಮನಾಬಾದ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved