ಮಡಿವಾಳ ಪೊಲೀಸ್ ಠಾಣಾ ಸರಹದ್ದಿನ ಎನ್.ಎಸ್.ಪಾಳ್ಯದಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:17/10/2024 ರಂದು ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:29/09/2024 ರಂದು ಹೊಸೂರು ಮುಖ್ಯರಸ್ತೆಯ ಹೆಚ್.ಡಿ.ಎಫ್.ಸಿ ಬ್ಯಾಂಕ್ ಮುಂಭಾಗ ಪಿರಾದುದಾರರು ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ, ಬಸ್ ಟಿಕೆಟ್ ಬುಕ್ ಮಾಡಲೆಂದು ಹೋಗಿರುತ್ತಾರೆ. ಪಿರಾದುದಾರರು ವಾಪಸ್ ಬಂದು ನೋಡಲಾಗಿ, ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ
ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಮಡಿವಾಳ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
https://youtube.com/shorts/_K8sa62UV0s

ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ, ದಿನಾಂಕ:20/10/2024 ರಂದು ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿಯೂ ಸಹ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:21/10/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 3 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್’ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಿ, ಆರೋಪಿಯು ನೀಡಿದ ಮಾಹಿತಿ ಮೇರೆಗೆ ದಿನಾಂಕ:21/10/2024 ರಂದು ಸಿಲ್ಕ್ ಬೋರ್ಡ್ ಬಳಿ ಇರುವ ಸ್ಮಶಾನದ ಕಾಂಪೌಂಡ್ ಪಕ್ಕದಲ್ಲಿ ಕಳವು ಮಾಡಿ ನಿಲ್ಲಿಸಿದ್ದ 4 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:22/10/2024 ರಂದು ಮಡಿವಾಳ ಮಾರ್ಕೆಟ್‌ನಲ್ಲಿ ನಿಲ್ಲಿಸಿದ್ದ 4 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:23/10/2024 ರಂದು ಮಡಿವಾಳ ವಿ.ಪಿ.ರಸ್ತೆಯಲ್ಲಿರುವ ಕಾವೇರಿ ಕಾನ್ವೆಂಟ್ ಸ್ಕೂಲ್ ಬಳಿ ನಿಲ್ಲಿಸಿದ್ದ 5 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಒಟ್ಟಾರೆಯಾಗಿ ಈ ಪ್ರಕರಣದ ಆರೋಪಿಯ ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ 10 ಲಕ್ಷ.
ಬಂಧನದಿಂದ 14 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ

ಈ ಪ್ರಕರಣದ ಆರೋಪಿಯ ಬಂಧನದಿಂದ 1) ಮಡಿವಾಳ ಪೊಲೀಸ್ ಠಾಣೆಯ-07 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ಬನಶಂಕರಿ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಹುಡೋ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 9 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, ಉಳಿದ 05 ದ್ವಿ-ಚಕ್ರ ವಾಹನಗಳ ಮಾಲೀಕರು ಪತ್ತೆಯಾಗಬೇಕಾಗಿರುತ್ತದೆ. ತನಿಖೆ ಮುಂದುವರೆದಿದೆ.
ದಿನಾಂಕ:23/10/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಆಗೋಯ ವಿಭಾಗದ ಉಪ ಶ್ರೀಮತಿ ಸರಾಫಾತಿಮಾ, ಐ.ಪಿ.ಎಸ್ ರವರು ಮತ್ತು ಮಡಿವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀನಾರಾಯಣ ರವರುಗಳ ಮಾರ್ಗದರ್ಶನದಲ್ಲಿ ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಮೊಹಮ್ಮದ್ ಎಂ.ಎ. ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.









