20 ವಿವಿಧ ಮಾದರಿಯ ದ್ವಿ-ಚಕ್ರ ವಾಹನಗಳ ವಶ, ಮೌಲ್ಯ 15 ಲಕ್ಷ
ವರ್ತೂರು ಪೊಲೀಸ್ ಠಾಣಾಸರಹದ್ದಿನ ದೊಡ್ಡ ನೆಕ್ಕುಂದಿಯಲ್ಲಿ ವಾಸವಿರುವ ಪಿರಾದುದಾರರು 05:13/01/2025 ರಂದು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:13/01/2025 ರಂದು ವರ್ತೂರು ಗ್ರಾಮದ ಬಳಗೆರೆ ಮುಖ್ಯರಸ್ತೆಯಲ್ಲಿರುವ ಹೋಟೆಲ್ ಬಳಿ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ ಹೋಗಿರುತ್ತಾರೆ. ವಾಪಸ್ ಬಂದು ನೋಡಲಾಗಿ ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವರ್ತೂರು ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:25/01/2025 ರಂದು ಠಾಣಾ ಸರಹದ್ದಿನ ಹಲಸಳ್ಳಿ ಮುಖ್ಯರಸ್ತೆಯಲ್ಲಿ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನದ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ಸರಹದ್ದಿನಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:25/01/2025 ರಂದು ಠಾಣಾ ಸರಹದ್ದಿನ ಗುಂಜೂರು ಗ್ರಾಮದ ನೀಲಗಿರಿ ತೋಪಿನಲ್ಲಿ ಕಳವು ಮಾಡಿ ನಿಲ್ಲಿಸಿದ್ದ 19 ದ್ವಿ-ಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.

ಒಟ್ಟಾರೆ ಈ ಪ್ರಕರಣದ ಆರೋಪಿಯ ವಶದಿಂದ 20 ದ್ವಿ-ಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾ ಗಿರುತ್ತದೆ. ಇವುಗಳ ಒಟ್ಟು ಮೌಲ್ಯ 7 15,00,000/-(ಹದಿನೈದು ಲಕ್ಷ ರೂಪಾಯಿ)
ಈ ಪ್ರಕರಣದ ಆರೋಪಿಯ ಬಂಧನದಿಂದ, 1) ವರ್ತೂರು ಪ್ರೊ. ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ವೈಟ್ ಫೀಲ್ಡ್ ಪ್ರೊ.ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 3) ಮಾರತ್ತಹಳ್ಳಿ ಪ್ರೊ.ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4)ಮಹದೇವಪುರ ಪ್ರೊ.ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 5) ಸಂಪಿಗೆಹಳ್ಳಿ ಪ್ರೊ.ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 6) ಹೊಸಕೋಟೆ ಪೊ.ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ, ಒಟ್ಟು 8 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 12 ದ್ವಿ-ಚಕ್ರ ವಾಹನಗಳ ಮಾಲೀಕರ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ದಿನಾಂಕ:27/01/2025 ರಂದು ಆರೋಪಿಗೆ ಠಾಣೆಯಲ್ಲಿ ನೋಟಿಸ್‌ನ್ನು ನೀಡಿ, ಬಿಡುಗಡೆ ಮಾಡಿರುತ್ತೆ.

ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ ಫೀಲ್ಡ್ ಡಾಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್‌ಆಯುಕ್ತರು, ಮಾರತ್ ಹಳ್ಳಿ ಉಪ ವಿಭಾಗ ಶ್ರೀಮತಿ ಪ್ರಿಯದರ್ಶಿನಿ ಈಶ್ವರ್ ಸಾಣೆಕೊಪ್ಪರವರ ಮಾರ್ಗದರ್ಶನದಲ್ಲಿ ವರ್ತೂರು ಪೊಲೀಸ್‌ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿರವರು ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









