ಶುಭ ಸಮಾರಂಭಗಳ ಸಂಭ್ರಮದ ನಡುವೆ ಅತಿಥಿಯಂತೆ ಬಂದು ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯಿಂದ ಬರೋಬ್ಬರಿ 32 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ನವೆಂಬರ್ 23ರಂದು ಬಸವನಗುಡಿಯ ಕಲ್ಯಾಣ ಮಂಟಪವೊಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಿರ್ಯಾದುದಾರರ ತಾಯಿ ತನ್ನ ಬ್ಯಾಗ್ ಅನ್ನು ಕೊಠಡಿಯಲ್ಲಿ ಇಟ್ಟಿದ್ದರು. ಇದನ್ನು ಗಮನಿಸಿದ ಮಹಿಳಾ ಕಳ್ಳಿಯೊಬ್ಬಳು ಬ್ಯಾಗ್‌ನಲ್ಲಿದ್ದ ಚಿನ್ನದ ಚೈನ್ ಅನ್ನು ಎಗರಿಸಿ ಪರಾರಿಯಾಗಿದ್ದಳು.
ಬಸವನಗುಡಿ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಮತಿ ಸವಿತಾ ನೇತೃತ್ವದ ತಂಡವು ತನಿಖೆ ನಡೆಸಿ, ಕೆ.ಆರ್. ಪುರಂನ ಉದಯನಗರದಲ್ಲಿ ಆರೋಪಿತೆಯನ್ನು ಬಂಧಿಸಿದೆ. ವಿಚಾರಣೆ ವೇಳೆ ಆಕೆ ಬಸವನಗುಡಿ ವ್ಯಾಪ್ತಿಯ 3 ಕಲ್ಯಾಣ ಮಂಟಪಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
ದ್ದ ಚಿನ್ನಾಭರಣಗಳನ್ನು ಆರೋಪಿತೆಯು ತನ್ನ ವಾಸದ ಮನೆಯಲ್ಲಿ ಬಚ್ಚಿಟ್ಟಿದ್ದಳು ಹಾಗೂ ಕೆಲವು ಒಡವೆಗಳನ್ನು ಕಾಡುಬೀಸನಹಳ್ಳಿಯ ಬ್ಯಾಂಕ್‌ವೊಂದರಲ್ಲಿ ಪತಿ ಮತ್ತು ತನ್ನ ಹೆಸರಿನಲ್ಲಿ ಅಡವಿಟ್ಟು ‘ಗೋಲ್ಡ್ ಲೋನ್’ ಪಡೆದಿದ್ದಳು ಎಂದು ತಿಳಿದುಬಂದಿದೆ.
ಪೊಲೀಸರು ಒಟ್ಟು 262 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ವಶಪಡಿಸಿಕೊಂಡ ಮಾಲಿನ ಅಂದಾಜು ಮೌಲ್ಯ 32 ಲಕ್ಷ.
ದ್ಯಕ್ಕೆ ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಇತರ ಜಿಲ್ಲೆಗಳಲ್ಲಿ ಆಕೆ ನಡೆಸಿರುವ ಕಳ್ಳತನದ ಬಗ್ಗೆ ತನಿಖೆ ಮುಂದುವರಿದಿದೆ. ಮದುವೆ ಸಮಾರಂಭಗಳಲ್ಲಿ ಸಾರ್ವಜನಿಕರು ತಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಲು ಪೊಲೀಸರು ಮನವಿ ಮಾಡಿದ್ದಾರೆ.







