Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ವೃದ್ದ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸರಪಹರಣ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

CREDOPRESS MEDIA PVT LTD by CREDOPRESS MEDIA PVT LTD
December 14, 2024
in Bengaluru City Police,Latest News,Namma Police,Namma Police News
0
ವೃದ್ದ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸರಪಹರಣ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.
0
SHARES
15
VIEWS
Share on FacebookShare on Twitter

5 ದ್ವಿ-ಚಕ್ರ ವಾಹನಗಳ ವಶ, ಮೌಲ್ಯ 1 2.5 ಲಕ್ಷ.
ಬಾಗಲಗುಂಟೆ ಪೊಲೀಸ್ ಠಾಣಾ ಸರಹದ್ದಿನ ಸಿಡೇದೆಹಳ್ಳಿ ಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:12/10/2024 ರಂದು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:11/10/2024 ರಂದು ರಾತ್ರಿ ಪಿರಾದುದಾರರು ಮನೆಯ ಕೊಠಡಿಯಲ್ಲಿ ಮಲಗಿರುತ್ತಾರೆ. ಅಪರಿಚಿತ ವ್ಯಕ್ತಿಯೊರ್ವನು ಪಿರಾದುದಾರರ ಮನೆಯ ಬಾಗಿಲ ಚಿಲಕವನ್ನು ಕಿಟಕಿಯ ಮೂಲಕ ತೆರೆದು, ಮನೆಯೊಳಗೆ ಪ್ರವೇಶಿಸಿ, ಪಿರಾದುದಾರರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಳ್ಳುತ್ತಿದಾಗ ಪಿರಾದುದಾರರು ಎಚ್ಚರಗೊಂಡು ತಡೆಯಲು ಹೋದಾಗ, ಪಿರಾದುದಾರರನ್ನು ಮಂಚದಿಂದ ಕೆಳಗೆ ತಳ್ಳಿ 3 85,000/- ಸಾವಿರ ಬೆಲೆ ಬಾಳುವ 13 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ಬೆರಳಚ್ಚು ತಜ್ಞರು ನೀಡಿದ ಮಾಹಿತಿ ಆಧಾರದ ಮೇರೆಗೆ ಹಾಗೂ ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:18/10/2024 ರಂದು ದಾಸರಹಳ್ಳಿ ಪೈಪ್‌ ಲೈನ್ ರಸ್ತೆಯಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಸರ ಅಪಹರಣ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:19/10/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 7 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಈ ಹಿಂದೆ 2023 ನೇ ಸಾಲಿನಲ್ಲಿ ಮಾದನಾಯಕನಹಳ್ಳಿ ಯಿಂದ 8ನೇ ಮೈಲಿ ಕಡೆಗೆ ಹೋಗುವ ಬಸ್ಸಿನಲ್ಲಿ ವೃದ್ಧೆಯೊಬ್ಬರ ಪರ್ಸ್‌ನ್ನು ಕಳವು ಮಾಡಿಕೊಂಡು ಬಂದು ಪರ್ಸಿನಲ್ಲಿದ್ದ 25 ಗ್ರಾಂ ಚಿನ್ನದ ಚೈನನ್ನು ಹಾಗೂ ಈ ಪ್ರಕರಣದಲ್ಲಿ 13 ಗ್ರಾಂ ಚಿನ್ನದ ಚೈನನ್ನು ಅಪಹರಣ ಮಾಡಿದ್ದನ್ನು ಬನಶಂಕರಿ ಮಣಪುರಂ ನಲ್ಲಿ ಅಡಮಾನ ಇಟ್ಟಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:25/10/2024 ರಂದು ಆರೋಪಿಯು ಕಳುವು ಮಾಡಿದ್ದ, 5 ದ್ವಿ-ಚಕ್ರ ವಾಹನಗಳನ್ನು ರವೀಂದ್ರ ನಗರ ಬೆಂಕಿ ಮನೇಶ್ವರ ದೇವಸ್ಥಾನದ ಹತ್ತಿರವಿರುವ ಖಾಲಿ ಜಾಗದಲ್ಲಿ ನಿಲ್ಲಿಸಿದನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ 32,50,000/-(ಎರಡು ಲಕ್ಷದ ಐವತ್ತು ಸಾವಿರ ರೂಪಾಯಿ).
ಅದೇ ದಿನ ಆರೋಪಿಯು ಅಡಮಾನವಿಟ್ಟಿದ್ದ ಎರಡು ಚಿನ್ನದ ಚೆನ್‌ನ್ನು ನೀಡುವಂತೆ ಬನಶಂಕರಿಯಲ್ಲಿರುವ ಮಣಪುರಂ ಶಾಖೆಯವರಿಗೆ ನೋಟಿಸ್ ಜಾರಿ ಮಾಡಿದ್ದು, ಮಣಪುರಂ ಶಾಖೆಯವರು ಠಾಣೆಗೆ ತಂದು ಒಪ್ಪಿಸುವುದಾಗಿ ತಿಳಿಸಿರುತ್ತಾರೆ.
ಈ ಪ್ರಕರಣದ ಆರೋಪಿಯ ಬಂಧನದಿಂದ 1) ಬಾಗಲಗುಂಟೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 1 ಜೇಬುಗಳ್ಳತನ ಪ್ರಕರಣ ಹಾಗೂ 1-ಸರಅಪಹರಣ ಪ್ರಕರಣ 2) ಮಾಗಡಿ ರಸ್ತೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ವಿಜಯನಗರ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4) ಕೋರಮಂಗಲ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ 5) ಜಯನಗರ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 5 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, ಜೇಬುಗಳ್ಳತನ ಪ್ರಕರಣ ಹಾಗೂ 1-ಸರ ಅಪಹರಣ ಪ್ರಕರಣ ಪತ್ತೆಯಾಗಿರುತ್ತದೆ.
ದಿನಾಂಕ:25/10/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಶ್ರೀ ಸೈದುಲ್ಲಾ ಅಡವತ್ ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರು, ಉತ್ತರ ವಿಭಾಗ ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ. ಶ್ರೀ ಸದಾನಂದ ತಿಪ್ಪಣ್ಣವರ್, ಸಹಾಯಕ ಪೊಲೀಸ್ ಆಯುಕ್ತರು ಪೀಣ್ಯ ಉಪ ವಿಭಾಗ ರವರ ನೇತೃತ್ವದಲ್ಲಿ, ಬಾಗಲಗುಂಟೆ ಪೊಲೀಸ್ ಠಾಣೆ ಪೊಲೀಸ್ ಇನ್ಸಪೆಕ್ಟರ್ ಶ್ರೀ ಹನುಮಂತರಾಜ್.ಎಂ ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ವೃದ್ಧರೊಬ್ಬರ ಆರೈಕೆಗೆ ಬಂದವ ಚಿನ್ನಾಭರಣ ಕದ್ದು ಪರಾರಿ.

    ವೃದ್ಧರೊಬ್ಬರ ಆರೈಕೆಗೆ ಬಂದವ ಚಿನ್ನಾಭರಣ ಕದ್ದು ಪರಾರಿ.

    ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    ಮಡಿವಾಳ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ, 7 ಕೆ.ಜಿ 310 ಗ್ರಾಮ ಗಾಂಜಾ ವಶಪಡಿಸಿಕೊಂಡಿರುತ್ತಾರೆ

    ಮಡಿವಾಳ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ, 7 ಕೆ.ಜಿ 310 ಗ್ರಾಮ ಗಾಂಜಾ ವಶಪಡಿಸಿಕೊಂಡಿರುತ್ತಾರೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved