ಜಯನಗರ ಪೊಲೀಸ್ ಠಾಣೆಯಲ್ಲಿ ಪಿರಾದುದಾರರು 05:31/08/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಜಯನಗರ 5ನೇ ಹಂತದಲ್ಲಿರುವ ಕಾಫಿ ಅಂಗಡಿಯ ಮುಂದೆ ಕಾರನ್ನು ಪಾರ್ಕಿಂಗ್ ಮಾಡಿ ಹೋಗಿರುತ್ತಾರೆ. ಪಿರಾದುದಾರರು ವಾಪಸ್ ಬಂದು ನೋಡಲಾಗಿ, ಕಾರಿನ ಕಿಟಕಿಯ ಗ್ಲಾಸ್‌ನ್ನು ಒಡೆದು ಕಾರಿನಲ್ಲಿಟ್ಟಿದ್ದ ಲ್ಯಾಪ್ ಟಾಪ್‌ನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ತನಿಖೆಯನ್ನು ಮುಂದುವರೆಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:12/09/2024 ರಂದು ತಮಿಳುನಾಡಿನ ಸೇಲಂನಲ್ಲಿರುವ ದಡಗಪಟ್ಟಿ ಸರ್ಕಲ್ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಕಾರಿನ ಗ್ಲಾಸ್‌ನ್ನು ಒಡೆದು ಲ್ಯಾಪ್ ಟಾಪ್‌ನ್ನು ಕಳವು ಮಾಡಿರುವುದಾಗಿ ತಪ್ಪಿಪ್ಪಿಕೊಂಡಿರುತ್ತಾನೆ.
ದಿನಾಂಕ:12/09/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 9 ದಿನಗಳಕಾಲ ಪೊಲೀಸ್ ಆಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಕಾರುಗಳ ಗ್ಲಾಸ್‌ನ್ನು ಒಡೆದು ಲ್ಯಾಪ್ ಟಾಪ್‌ಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಕಳವು ಮಾಡಿದ ಲ್ಯಾಪ್‌ಟಾಪ್‌ಗಳನ್ನು ಮಾರಾಟ ಮಾಡುವ ಸಲುವಾಗಿ ತಮಿಳುನಾಡಿನ ಸೇಲಂನಲ್ಲಿರುವ ದಡಗಪಟ್ಟಿಯಲ್ಲಿರುವ ಆತನ ವಾಸದ ಮನೆಯಲ್ಲಿಟ್ಟಿರುವುದಾಗಿ ತಿಳಿಸಿರುತ್ತಾನೆ. ಈ ಲ್ಯಾಪ್ ಟಾಪ್‌ಗಳನ್ನು ತಂದು ಹಾಜರ್ ಪಡಿಸುವಂತೆ ಆರೋಪಿಯ ತಾಯಿಯವರಿಗೆ ನೋಟಿಸ್‌ನ್ನು ಜಾರಿ ಮಾಡಿದ್ದು, ಅದರಂತೆ ಆರೋಪಿಯ ತಾಯಿಯು DOB:24/09/2024 ರಂದು 17 ಲ್ಯಾಪ್‌ಟಾಪ್‌ಗಳನ್ನು ಪೊಲೀಸ್ ಠಾಣೆಗೆ ತಂದು ಹಾಜರ್ ಪಡಿಸಿರುತ್ತಾರೆ. ಇವುಗಳ ಒಟ್ಟು ಮೌಲ್ಯ 12,00,000/-(ಹನ್ನೆರೆಡು ಲಕ್ಷ ರೂಪಾಯಿ).

ಈ ಪ್ರಕರಣದ ಆರೋಪಿಯ ವಶದಿಂದ ಕೃತ್ಯಕ್ಕೆ ಬಳಸುತ್ತಿದ್ದ ಒಂದು ದ್ವಿ-ಚಕ್ರ ವಾಹನ, ಒಟ್ಟು 17 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಂಡಿದ್ದು, ಜಯನಗರ ಪೊಲೀಸ್ ಠಾಣೆಯ 5 ಲ್ಯಾಪ್ ಟಾಪ್ ಕಳವು ಪ್ರಕರಣಗಳಲ್ಲಿ 6 ಲ್ಯಾಪ್‌ಟಾಪ್‌ಗಳು ಪತ್ತೆಯಾಗಿರುತ್ತವೆ. || ಲ್ಯಾಪ್ಟಾಪ್‌ಗಳ ಪತ್ತೆ ಕಾರ್ಯ ಮುಂದುವರೆದಿದೆ.
ದಿನಾಂಕ:26/09/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಉಪದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲೋಕೇಶ್ ಜಗಳಾಸರ್ ಐ.ಪಿ.ಎಸ್ರವರ ಮಾರ್ಗದರ್ಶನದಲ್ಲಿ ಹಾಗೂ ಜಯನಗರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾರಾಯಣಸ್ವಾಮಿ.ವಿ ರವರ ನೇತೃತ್ವದಲ್ಲಿ, ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ದೀಪಕ್ ಆರ್ ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.









