ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ, ಚಿಕ್ಕಬಾಣವಾರದ ವಿನಾಯಕ ಲೇಔಟ್‌ನಲ್ಲಿ ವಾಸವಿರುವ ಫಿರಾದುದಾರರು, ದಿನಾಂಕ:10/03/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:09/03/2024 ರಂದು ಬೆಳಿಗ್ಗೆ ತಮ್ಮ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿ, ನಂತರ ಗಂಗಮ್ಮನಗುಡಿಯಲ್ಲಿರುವ ಅಕ್ಕನ ಮನೆಗೆ ಹೋಗಿ ಅಲ್ಲಿಯೇ ಉಳಿದುಕೊಂಡಿರುತ್ತೇನೆ. ದಿನಾಂಕ:10/03/2024 ರಂದು ಮಧ್ಯಾಹ್ನ ಸುಮಾರು 2-00 ಗಂಟೆ ಸಮಯದಲ್ಲಿ ಫಿರಾದಿದಾರರ ಪಕ್ಕದ ಮನೆಯವರು ಫಿರಾದುದಾರರಿಗೆ ದೂರವಾಣಿ ಕರೆ ಮಾಡಿ ನಿಮ್ಮ ಮನೆಯ ಬಾಗಿಲ ಬೀಗವನ್ನು ಯಾರೋ ಕಳ್ಳರು ಹೊಡೆದಿರುತ್ತಾರೆಂದು ತಿಳಿಸಿರುತ್ತಾರೆ. ಫಿರಾದಿದಾರರು ಮನೆಯ ಬಳಿ ಬಂದು ನೋಡಲಾಗಿ, ಮನೆಯ ಮುಂದಿನ ಬಾಗಿಲನ್ನು ಹೊಡೆದಿದ್ದು, ಕೊಠಡಿಯ ಬೀರುವಿನಲ್ಲಿದ್ದ 40-50 ಗ್ರಾಂ ತೂಕದ ಚಿನ್ನಾಭರಣ, 1-ಲ್ಯಾಪ್ಟಾಪ್ ಕಳುವಾಗಿರುತ್ತದೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಸೋಲದೇವನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಹಗಲು ಮತ್ತು ರಾತ್ರಿ ಕನ್ನ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಪಡೆದು, ದಿನಾಂಕ:22/07/2024 ರಂದು ನೆಲಮಂಗಲದ ಕುಣಿಗಲ್ ಬೈಪಾಸ್ ರಸ್ತೆಯಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ಕಳುವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ದಿನಾಂಕ:23/07/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ 7 ದಿನಗಳ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
50ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಕಳುವು ಮಾಡಿರುವ ಚಿನ್ನಾಭರಣಗಳ ಪೈಕಿ ಚಿನ್ನಾಭರಣಗಳನ್ನು ತನ್ನ ವಾಸದ ಮನೆಯಲ್ಲಿ ಇಟ್ಟಿರುವುದಾಗಿ ತಿಳಿಸಿದ್ದು ಅದನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಮತ್ತು 51 ಗ್ರಾಂ ಚಿನ್ನಾಭರಣಗಳನ್ನು ಹಾಸನ ಜಿಲ್ಲೆಯ ಜ್ಯೂವೆಲರಿ ಅಂಗಡಿಯಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಒಟ್ಟು 101 ಗ್ರಾಂ ಚಿನ್ನಾಭರಣ, 2-ಲ್ಯಾಪ್‌ಟಾಪ್‌ಗಳು ಮತ್ತು 1 ದ್ವಿ-ಚಕ್ರ ವಾಹನ ಗಳನ್ನು ದಿನಾಂಕ:26/07/2024 ರಂದು ವಶಪಡಿಸಿ ಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 8,00,000/-( of down).
ದಿನಾಂಕ:29/07/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಪ್ರಕರಣದ ಆರೋಪಿಯ ಬಂಧನದಿಂದ ಸೋಲದೇವನಹಳ್ಳಿ ಪೊಲೀಸ್ ಠಾಣೆಯ-5 ರಾತ್ರಿ ಕನ್ನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಕಾರ್ಯಾಚರಣೆಯನ್ನು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಸೈದುಲು ಅಡಾವತ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀಮತಿ, ಮೇರಿ ಶೈಲಜ, ಎಸಿಪಿ, ಯಶವಂತಪುರ ಉಪ ವಿಭಾಗ ಮತ್ತು ಶ್ರೀ. ಹೆಚ್.ಹರಿಯಪ್ಪ, ಪೊಲೀಸ್ ಇನ್ಸ್ಪೆಕ್ಟರ್, ಸೋಲದೇವನಹಳ್ಳಿ ಪೊಲೀಸ್ ಠಾಣೆ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









