ದಿನಾಂಕ:03.09.2024 ರಂದು ಓರ್ವ ವ್ಯಕ್ತಿಯು ಇಂದಿರಾನಗರದ ಬಿ.ಡಿ.ಎ ಕಾಂಪ್ಲೆಕ್ಸ್ ಬಳಿ ಸಾರ್ವಜನಿಕರಿಗೆ ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳನ್ನು ಮಾರಾಟ ಮಾಡುತ್ತಿರುವುದಾಗಿ ಇಂದಿರಾನಗರ ಠಾಣಾ ಪೊಲೀಸರಿಗೆ ಬಾ ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತ್ತಿರುತ್ತದೆ. ಈ ಮಾಹಿತಿಯನ್ನು ಆಧಾರಿಸಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು, ಎಂ.ಡಿ.ಎಂ.ಎ ಕ್ರಿಸ್ಟೆಲ್ ಮಾರಾಟ ಮಾಡುತ್ತಿದ್ದ ಸ್ಥಳದಲ್ಲಿ ದಾಳಿ ಮಾಡಿ, ಓರ್ವ ಹೊರ ರಾಜ್ಯದ ವ್ಯಕ್ತಿಯನ್ನು, 78 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ಮೌಲ್ಯ 32.34 ಲಕ್ಷ.
ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಕೇರಳ ರಾಜ್ಯದ ಕಾಸರಗೂಡಿನಿಂದ ಕಡಿಮೆ ಬೆಲೆಗೆ ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳನ್ನು ತಂದು ಸಾರ್ವಜನಿಕರಿಗೆ ಮಾರಾಟ ಮಾಡಿ, ಹೆಚ್ಚಿನ ಹಣ ಸಂಪಾದನೆ ಮಾಡುವ ಸಲುವಾಗಿ ಈ ಕೃತ್ಯವೆಸಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:04/09/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಡಿ ದೇವರಾಜ, ಐಪಿಎಸ್ಮತ್ತು ಹಲಸೂರು ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಉಮಾಶಂಕರ್ ಎಂ.ಎಚ್ ರವರ ಮಾರ್ಗದರ್ಶನದಲ್ಲಿ ಇಂದಿರಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಸುದರ್ಶನ್ ಹೆಚ್.ವಿ ಮತ್ತು ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.









