Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

11-ದ್ವಿ-ಚಕ್ರ ವಾಹನ, 40-ಗ್ಯಾಸ್ ಸಿಲಿಂಡರ್ ಮತ್ತು 28-ಬ್ಯಾಟರಿಗಳನ್ನು ಕಳವು ಮಾಡಿದ್ದ ಇಬ್ಬರು ವ್ಯಕ್ತಿಗಳ ಬಂಧನ, ಮೌಲ್ಯ 15 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
December 14, 2024
in Bengaluru City Police,Latest News,Namma Police,Namma Police News
0
11-ದ್ವಿ-ಚಕ್ರ ವಾಹನ, 40-ಗ್ಯಾಸ್ ಸಿಲಿಂಡರ್ ಮತ್ತು 28-ಬ್ಯಾಟರಿಗಳನ್ನು ಕಳವು ಮಾಡಿದ್ದ ಇಬ್ಬರು ವ್ಯಕ್ತಿಗಳ ಬಂಧನ, ಮೌಲ್ಯ 15 ಲಕ್ಷ.
0
SHARES
46
VIEWS
Share on FacebookShare on Twitter


ತಿಲಕನಗರ ಪೊಲೀಸ್ ಠಾಣೆಯ ಔಟರ್ ರಿಂಗ್ ರಸ್ತೆಯಲ್ಲಿ ಪಿರಾದುದಾರರು ಬಟ್ಟೆ ಅಂಗಡಿಯೊಂದನ್ನು ಇಟ್ಟುಕೊಂಡಿರುತ್ತಾರೆ. ದಿನಾಂಕ:18/10/2024 ರಂದು ಪಿರಾದುದಾರರು ತಿಲಕನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:16/09/2024 ರಿಂದ 17/09/2024 ರ ನಡುವೆ ಅಂಗಡಿಯ ಹಿಂಭಾಗದಲ್ಲಿ ಅಳವಡಿಸಿದ್ದ 6 ಬ್ಯಾಟರಿಗಳನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ದಿನಾಂಕ:27/11/2024 ರಂದು ಈ ಪ್ರಕರಣದಲ್ಲಿ ಭಾಗಿಯಾಗಿದ್ದ. ಇಬ್ಬರು ವ್ಯಕ್ತಿಗಳನ್ನು 1 ದ್ವಿ-ಚಕ್ರ ವಾಹನ ಮತ್ತು 1 ಬ್ಯಾಟರಿಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪಿಪ್ಪಿಕೊಂಡಿರುತ್ತಾರೆ. ಹಾಗೂ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿ-ಚಕ್ರ ವಾಹನಗಳನ್ನು, ಗ್ಯಾಸ್‌ ಸಿಲೆಂಡರ್‌ಗಳನ್ನು ಹಾಗೂ ಬ್ಯಾಟರಿಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:28/11/2024 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 9 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆಯಲಾಯಿತು.



ದಿನಾಂಕ:29/11/2024 ರಂದು ಆರೋಪಿಗಳಿಬ್ಬರು, ಮಾರಾಟ ಮಾಡಿದ್ದ 12 ಸಿಲೆಂಡರ್‌ಗಳನ್ನು ಗೊಟ್ಟಿಗೆರೆ ರಸ್ತೆಯಲ್ಲಿ ವಾಸವಿರುವ ಓರ್ವ ವ್ಯಕ್ತಿಗೆ ನೋಟಿಸ್ ನೀಡಿದ್ದು, ಆತನು ಠಾಣೆಗೆ ತಂದು ಹಾಜರುಪಡಿಸಿದ ಸಿಲೆಂಡರ್‌ಗಳನ್ನು ವಶಪಡಿಸಿಕೊಳ್ಳಲಾಯಿತು.
ಅದೇ ದಿನ ಬೆಟ್ಟದಾಸನಪುರದಲ್ಲಿ ವಾಸವಿರುವ ಓರ್ವ ಮಹಿಳೆಗೆ 04 ಸಿಲೆಂಡರ್‌ಗಳನ್ನು ಮಾರಾಟ ಮಾಡಿರುವುದಾಗಿ ತಿಳಿಸಿದ ಮೇರೆಗೆ, ಆ ಮಹಿಳೆಗೆ ನೋಟಿಸ್‌ ನೀಡಿದ್ದು, ಆಕೆಯು ಠಾಣೆಗೆ ತಂದು ಹಾಜರುಪಡಿಸಿದ 04 ಸಿಲೆಂಡರ್‌ಗಳನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:30/11/2024 ರಂದು 10 ಸಿಲೆಂಡರ್‌ಗಳನ್ನು ದೇವನಹಳ್ಳಿ ಗ್ರಾಮದಲ್ಲಿರುವ ಓರ್ವ ವ್ಯಕ್ತಿಗೆ ಮಾರಾಟ ಮಾಡಿದ್ದನ್ನು ನೋಟಿಸ್ ಜಾರಿ ಮಾಡಿದ್ದು, ಆತನು 10 ಸಿಲೆಂಡರ್‌ಗಳನ್ನು ಠಾಣೆಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಯಿತು. ಅದೇ ದಿನ ಪ್ರಕರಣದ ಆರೋಪಿಯೋರ್ವನ ಮನೆಯಿಂದ 14 ಸಿಲೆಂಡರ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ದಿನಾಂಕ:30/11/2024 ರಂದು ಆರೋಪಿಗಳಿಬ್ಬರು 27 ಬ್ಯಾಟರಿಗಳನ್ನು ಬಿ.ಟಿ.ಎಂ ಲೇಔಟ್‌ನಲ್ಲಿರುವ ಗುಜರಿ ಅಂಗಡಿಗೆ ಮಾರಾಟ ಮಾಡಿದ್ದನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:03/12/2024 ರಂದು ತಿಲಕ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಜಲಭವನದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 5 ದ್ವಿ-ಚಕ್ರ ವಾಹನಗಳನ್ನು ಹಾಗೂ ಕಾರ್ಪೋರೇಷನ್ ಲೇಔಟ್‌ನ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 5 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಈ ಆರೋಪಿಗಳಿಬ್ಬರಿಂದ ಒಟ್ಟು 11 ದ್ವಿ-ಚಕ್ರ ವಾಹನ, 28 ಬ್ಯಾಟರಿಗಳು ಹಾಗೂ 40 ಸಿಲೆಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 15,00,000/-(ಹದಿನೈದು ಲಕ್ಷ ರೂಪಾಯಿ).


ಈ ಪ್ರಕರಣದ ಆರೋಪಿಗಳಿಬ್ಬರಿಂದ 1) ತಿಲಕ್‌ನಗರ ಪೊಲೀಸ್ ಠಾಣೆಯ-2 ಬ್ಯಾಟರಿ ಕಳವು ಪ್ರಕರಣ, 2) ಜೆ.ಪಿ.ನಗರ ಪೊಲೀಸ್‌ ಠಾಣೆಯ-02 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು 3) ಮಡಿವಾಳ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4) ಗಿರಿನಗರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 5) ಕೋಣನಕುಂಟೆ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 6) ಮೈಕೋಲೇಔಟ್ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 7) ಬೊಮ್ಮನಹಳ್ಳಿ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 8) ಕೆ.ಎಸ್‌. ಲೇಔಟ್ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 9) ಬೆಳಂದೂರು ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 10) ಸಿದ್ದಾಪುರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 11) ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 11 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. 40 ಸಿಲೆಂಡರ್‌ಗಳು ಮತ್ತು 26 ಬ್ಯಾಟರಿಗಳ ಮಾಲೀಕರುಗಳ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ದಿನಾಂಕ:04/12/2024 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.


ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ, ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಸಾರಾ ಫಾತೀಮಾ, ಐ.ಪಿ.ಎಸ್ಮತ್ತು ಮೈಕೋಲೇಔಟ್ ಉಪ-ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರಾದ ಶ್ರೀ ಶಿವಶಂಕರ ರೆಡ್ಡಿ ರವರ ಮಾರ್ಗದರ್ಶನದಲ್ಲಿ ತಿಲಕನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ವಿಶ್ವನಾಥ, ಕೆ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ..

    Tags: Bengaluru City PoliceKarnataka NewsKarnataka State PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    641 digital fraud cases in 2024, Rs 109 crore loss for Karnataka!-Dr. G Parameshwara

    641 digital fraud cases in 2024, Rs 109 crore loss for Karnataka!-Dr. G Parameshwara

    ದ್ವಿ-ಚಕ್ರ ವಾಹನ ಹಾಗೂ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 2 ದ್ವಿ-ಚಕ್ರ ವಾಹನ, 40 ಮೊಬೈಲ್ ಫೋನ್‌ಗಳ ವಶ, ಮೌಲ್ಯ 15.60 ಲಕ್ಷ.

    ದ್ವಿ-ಚಕ್ರ ವಾಹನ ಹಾಗೂ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 2 ದ್ವಿ-ಚಕ್ರ ವಾಹನ, 40 ಮೊಬೈಲ್ ಫೋನ್‌ಗಳ ವಶ, ಮೌಲ್ಯ 15.60 ಲಕ್ಷ.

    ಬ್ಯಾಂಕ್ ದರೋಡೆಕೋರರ ಬಂಧನ !

    ಬ್ಯಾಂಕ್ ದರೋಡೆಕೋರರ ಬಂಧನ !

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved