ಮಾನ್ಯ ಶ್ರೀ ಪ್ರದೀಪ್ ಗುಂಟಿ ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು ಬೀದರ, ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬೀದರ ಧನ್ನೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದ ಪತ್ತೆ ಕುರಿತು ಶ್ರೀ ಚಂದ್ರಕಾಂತ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಬೀದರ, ರವರ ಮುಂದಾಳತ್ವದಲ್ಲಿ ಶ್ರೀ ಶಿವಾನಂದ ಪವಾಡಶೆಟ್ಟಿ, ಪೊಲೀಸ್ ಉಪಾಧೀಕ್ಷಕರು ಭಾಲ್ಕಿ ರವರ ನೇತೃತ್ವದಲ್ಲಿ ಭಾಲ್ಕಿ ಗ್ರಾಮೀಣ ವೃತ್ತದ ಸಿ.ಪಿ.ಐ ಶ್ರೀ ಹನುಮರೆಡ್ಡೆಪ್ಪಾ ಶ್ರೀ ವಿಶ್ವಾರಾಧ್ಯ, ಪಿಎಸ್ಐ ಧನ್ನೂರ ಪೊಲೀಸ ಠಾಣೆ ಸಿಬ್ಬಂದಿಯರಾದ ಶ್ರೀ ಪ್ರಶಾಂತರಡ್ಡಿ, ಶ್ರೀ ಹರ್ಷವರ್ಧನ, ಶ್ರೀ ಸತ್ಯನಾರಾಯಣ ರವರನ್ನೊಳಗೊಂಡ ತಂಡವನ್ನು ರಚಿಸಿದ್ದು, ತಂಡವು ಸಿ.ಸಿ. ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ, ಪೊಲೀಸ್ ಬಾತ್ಮಿದಾರರಿಂದ ಪಡೆದ ಮಾಹಿತಿ ಆಧಾರದ ಮೇರಗೆ ವಾಹನ ಇರುವುದನ್ನು ಖಚಿತ ಪಡಿಸಿಕೊಂಡು ಒಂದು ಟಿಪ್ಪರ್ ವಾಹನ ಅ:ಕಿ: 4,50,000=00 ರೂಪಾಯಿ ಬೆಲೆ ಬಾಳುವ ಸ್ವತ್ತನ್ನು ವಶ ಪಡಿಸಿಕೊಳ್ಳಲಾಗಿದೆ.
ಅತೀ ಚಾಕ ಚಾಕತ್ಯೆಯಿಂದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.
ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ, ಪತ್ತೆ ಕಾರ್ಯ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಸದಾ ಮುಂದುವರೆಯುತ್ತದೆ.









