ನೂತನ ವರ್ಷಾಚರಣೆ ಸಂದರ್ಭದಲ್ಲಿ ಡ್ರಗ್ ಪೆಡ್ಲಿಂಗ್ ನಡೆಸಲು ರೂಪಿಸಲಾಗಿದ್ದ ವ್ಯವಸ್ಥಿತ ಸಂಚುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು ಯಶಸ್ವಿಯಾಗಿ ವಿಫಲಗೊಳಿಸಿದೆ. ಸಿಸಿಬಿ ಕಾರ್ಯಾಚರಣೆಯಲ್ಲಿ ಒಟ್ಟು 10 ಕೆ.ಜಿ 369 ಗ್ರಾಂ ಎಂಡಿಎಂಎ ಕ್ರಿಸ್ಟಲ್, 8 ಕೆ.ಜಿ ಹೈಡೋಗಾಂಜಾ ಸೇರಿದಂತೆ 28.75 ಕೋಟಿ ಮೌಲ್ಯದಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎರಡು ಪ್ರತ್ಯೇಕ ಪ್ರಕರಣ: ಸಂಪಿಗೆಹಳ್ಳಿ ಮತ್ತು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ ಸಿಸಿಬಿ ತಂಡವು, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದೆ.

ಸಂಪಿಗೆಹಳ್ಳಿಯ ಪಿ & ಟಿ ಲೇಔಟ್‌ನಲ್ಲಿ ವಿದೇಶಿ ಮಹಿಳೆಯೊಬ್ಬಳು ವಾಸವಿದ್ದ ಮನೆಯಿಂದ ಅಂದಾಜು 18.50 ಕೋಟಿ ಮೌಲ್ಯದ 9 ಕೆ.ಜಿ 254ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ.
ಸಿದ್ದಾಪುರ ವ್ಯಾಪ್ತಿಯಲ್ಲಿ ವಿದೇಶಿ ಪುರುಷನೊಬ್ಬನನ್ನು ಬಂಧಿಸಿ, ಆತನಿಂದ 2.25 ಕೋಟಿ ಮೌಲ್ಯದ 1 ಕೆ.ಜಿ 115 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ. ಈ ಆರೋಪಿಯ ವಿರುದ್ಧ 2024ರಲ್ಲಿ ಸಹ ಎನ್‌ಡಿಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿತ್ತು.
ವಿದೇಶಿ ಅಂಚೆ ಮೂಲಕ ಹೈಡೋಗಾಂಜಾ: ಚಾಮರಾಜಪೇಟೆಯಲ್ಲಿರುವ ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ, ವಿದೇಶದಿಂದ ಅಂಚೆ ಮೂಲಕ ತರಿಸಿಕೊಂಡಿದ್ದ ₹8 ಕೋಟಿ ಮೌಲ್ಯದ 8 ಕೆ.ಜಿ ಹೈಡೋಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪತ್ತೆಕಾರ್ಯ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು, ಶ್ರೀ.ರಾಜಾ ಇಮಾಮ್ ಖಾಸೀಂಉಪ ಪೊಲೀಸ್ ಅಪರಾಧ-2, ಬೆಂಗಳೂರು ನಗರ ರವರ ನೇತೃತ್ವದಲ್ಲಿ, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಎಸಿಪಿ ರವರಾದ ಶ್ರೀ.ಹೆಚ್.ಕೆ.ಮಹಾನಂದ್ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ರವರಾದ ಶ್ರೀ.ವಿ.ಡಿ.ಶಿವರಾಜು, ಶ್ರೀ.ಲಕ್ಷ್ಮಿನಾರಾಯಣ್.ಕೆ, ಶ್ರೀ.ರಕ್ಷಿತ್ ಎಕೆ ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ









