ಸಿಸಿಬಿಯ ವಿಶೇಷ ವಿಚಾರಣಾ ದಳದ ಅಧಿಕಾರಿ/ಸಿಬ್ಬಂದಿಗಳಿಗೆ ಆರ್.ಟಿ.ನಗರದ ದಿಣ್ಣೂರು ಮುಖ್ಯರಸ್ತೆಯ ಚಾಮುಂಡಿನಗರ ಧರ್ಮಣ್ಣ ಗಾರ್ಡನ್ನಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್ಗಳನ್ನು ತಯಾರು ಮಾಡಿ ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸಿ ಅಕ್ರಮ ಹಣ ಗಳಿಸುತ್ತಿರುವ ವ್ಯಕ್ತಿಗಳ ಬಗ್ಗೆ ಬಾತ್ಮೀದಾರರಿಂದ ಖಚಿತ ಮಾಹಿತಿ ಬಂದಿರುತ್ತದೆ. ಈ ಕುರಿತು ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಸಿಸಿಬಿಯ ಪೊಲೀಸರು ಬಾತ್ಮೀದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ಮಾಡಿ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿ, ಸಹಚರರುಗಳೊಂದಿಗೆ ಸೇರಿಕೊಂಡು ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾರೆ. ಅವರುಗಳ ವಶದಿಂದ ನಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್ಗಳು ಹಾಗೂ ಎಲೆಕ್ಟ್ರಾನಿಕ್ ಡಿವೈಜ್ಗಳು ಮತ್ತು ಉಪಕರಣಗಳು, ಕೃತ್ಯಕ್ಕೆ ಬಳಸಿರುವ 01 ಕಾರು, 01 ಆಟೋರಿಕ್ಷಾ, 03 ದ್ವಿಚಕ್ರ ವಾಹನಗಳು, 07 ಮೊಬೈಲ್ ಪೋನ್ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ ₹ 50,00,000/- (ಐವತ್ತು ಲಕ್ಷ ರೂಪಾಯಿ).
ದಿನಾಂಕ: 04/08/2026 ರಂದು ಐವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಐವರು ಆರೋಪಿಗಳನ್ನು ಸುದೀರ್ಘ ವಿಚಾರಣೆಗೊಳಪಡಿಸಿ, ಮಾಹಿತಿಗಳನ್ನು ಸಂಗ್ರಹಿಸಿ ದಿನಾಂಕ:07/08/2026 ರಂದು ಐವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ. ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇತರೆ ವ್ಯಕ್ತಿಗಳ ಪತ್ತೆ ಕಾರ್ಯ ಮುಂದುವರೆದಿದ್ದು, ತನಿಖೆ ಪ್ರಗತಿಯಲ್ಲಿರುತ್ತದೆ.
ಈ ಕಾರ್ಯಾಚರಣೆಯನ್ನು ಅಪರ ಪೊಲೀಸ್ ಆಯುಕ್ತರು, ಅಪರಾಧ ರವರ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರು, ಅಪರಾಧ-01 ರವರ ನೇತೃತ್ವದಲ್ಲಿ, ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತದೆ.
ದಿನಾಂಕ:06/07/2026 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಯತೀಶ್.ಎನ್. ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಬ್ಯಾಟರಾಯನಪುರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಉದಯ ಭಾಸ್ಕರ.ಜಿ.ವಿ ರವರ ನೇತೃತ್ವದಲ್ಲಿ, ಬ್ಯಾಟರಾಯನಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ವೆಂಕಟೇಶ್.ಹೆಚ್.ಎಸ್ ಮತ್ತು ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.







